Renukaswamy Case; ಶರಣಾದವರಿಗೆ ನೀಡಲು ಇಟ್ಟಿದ್ದ 30 ಲಕ್ಷ ರೂ. ಜಪ್ತಿ
ರಾಜರಾಜೇಶ್ವರಿ ನಗರದ ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ ಹಣ
Team Udayavani, Jun 14, 2024, 11:27 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಂತಕರಿಗೆ ನೀಡಲೆಂದು ಆರೋಪಿ ವಿನಯ್ ಮಾಲಕತ್ವದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ.ಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಶುಕ್ರವಾರ ಜಪ್ತಿ ಮಾಡಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿರುವ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ಗೆ ಶುಕ್ರವಾರ ಆರೋಪಿ ವಿನಯ್‌ನನ್ನು ಪೊಲೀಸರು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಈ ವೇಳೆ 30 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಇದು ಕೊಲೆ ಆರೋಪ ಎದುರಿಸುತ್ತಿರುವ ಯುವಕರಿಗೆ ನೀಡಲು ಇಟ್ಟಿದ್ದ ಹಣ ಎನ್ನಲಾಗಿದೆ.
ಕೊಲೆಯನ್ನು ನಾವೇ ಮಾಡಿರುವುದಾಗಿ ಹೇಳಿಕೊಂಡು ಠಾಣೆಗೆ ಬಂದಿದ್ದ ಆರೋಪಿಗಳಾದ ರಾಘವೇಂದ್ರ, ಕಾರ್ತಿಕ್, ನಿಖೀಲ್ ನಾಯಕ್, ಕೇಶವಮೂರ್ತಿಗೆ ತಲಾ 5 ಲಕ್ಷ ರೂ.ನಂತೆ ನೀಡಲು ಈ ಹಣವನ್ನು ಇಡಲಾಗಿತ್ತು. ರೇಣುಕಾಸ್ವಾಮಿಯನ್ನು ಕೊಲೆ ನಡೆಸಿದ ಬಳಿಕ ಆರೋಪಿಗಳು ಇದೇ ರೆಸ್ಟೋರೆಂಟ್‌ನಲ್ಲಿ ಸೇರಿ ಶರಣಾಗಲು 30 ಲಕ್ಷ ರೂ. ಡೀಲ್ ಕುದುರಿಸಿದ್ದರು ಎನ್ನಲಾಗಿದೆ.
ಅಪಹರಿಸಿ ಕರೆತಂದ ದೃಶ್ಯ ಸೆರೆ
ದರ್ಶನ್ ಮತ್ತು ತಂಡದಿಂದ ರೇಣುಕಾಸ್ವಾಮಿಯನ್ನು ಜೂನ್ 8ರ ಬೆಳಗ್ಗೆ 11.30ಕ್ಕೆ ಗುಯಿಲಾಳು ಟೋಲ್ ಬಳಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಕಾರಿನ ಮುಂಭಾಗ ಚಾಲಕ ರವಿ ಹಾಗೂ ರಾಘವೇಂದ್ರ ಕುಳಿತಿದ್ದರು. ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆ ಪ್ರಯಾಣ ಮಾಡಿರುವ ಈ ಗ್ಯಾಂಗ್ ವಿಐಪಿ ಕಾರ್ಡ್ ತೋರಿಸಿ ಹೋಗಿದ್ದಾರೆ. ದರ್ಶನ್ ಸಂಘದ ಅಧ್ಯಕ್ಷ ಎಂದು ಬಿಲ್ಡಪ್ ಕೊಟ್ಟು ಹೋಗಿದ್ದರು ಎನ್ನಲಾಗಿದೆ.
ಪವಿತ್ರಾ ಭೇಟಿಗೆ ಅವಕಾಶ ನಿರಾಕರಣೆ
ಪವಿತ್ರಾ ಗೌಡ ಭೇಟಿಗೆ ಆಕೆಯ ಸಹೋ ದರಿ ಹಾಗೂ ಸಂಬಂಧಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಬಂದಿದ್ದರು. ಭೇಟಿಗೆ ಪೊಲೀಸರು ನಿರಾಕರಿಸಿದರು. ಫೋನ್ ಮಾಡಿಸಿ ಒಳಗಡೆ ಹೋಗಲು ವಿಫಲ ಯತ್ನ ನಡೆಸಿದರು. ಸಾಂತ್ವನ ಕೇಂದ್ರಕ್ಕೆ ಹೋಗಿದ್ದಾಗ ಠಾಣೆಯಲ್ಲಿ ಭೇಟಿ ಮಾಡುವಂತೆ ಸೂಚಿಸಿ ಕಳುಹಿಸಲಾಗಿತ್ತು.
ದರ್ಶನ್ ವಿರುದ್ಧ ಸಾಕ್ಷ್ಯಗಳೇನಿವೆ ?
ಶೆಡ್‌ನಲ್ಲಿ ರೇಣುಕಾಸ್ವಾಮಿಯ ರಕ್ತದ ಕಲೆ, ಕೂದಲು, ಬೆವರಿನ ಸ್ಯಾಂಪಲ್ ಮತ್ತು ಆರೋಪಿಗಳ ಬೆರಳಚ್ಚು, ಪಾದದ ಹೆಜ್ಜೆ, ರಕ್ತದ ಮಾದರಿ, ಕೊಲೆ ಬಳಿಕ ದರ್ಶನ್‌ಗೆ ಕರೆ ಮಾಡಿದ್ದ ಆರೋಪಿಗಳು, ದರ್ಶನ್ ಕಾರು ಸಿಸಿ ಕೆಮರಾದಲ್ಲಿ ಸೆರೆ, ಒಂದೇ ಸ್ಥಳದಲ್ಲಿ ಆರೋಪಿಗಳಿರುವುದು ಟವರ್ ಡಂಪ್‌ನಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ದರ್ಶನ್, ಪವಿತ್ರಾ ಗೌಡ, ನಾಗ, ವಿನಯ್ ,ಸಹಿತ 6 ಮಂದಿಯ ಟವರ್ ಡಂಪ್, ಪೊಲೀಸ್ ಅಧಿಕಾರಿಗಳ ಜತೆ ಕೃತ್ಯದ ಬಗ್ಗೆ ಚರ್ಚಿಸಿರುವ ಕರೆಗಳು, ಮೃತದೇಹ ಎಸೆಯಲು ತಲಾ 5 ಲಕ್ಷ ನೀಡಿದ್ದಾಗಿ ಆರೋಪಿಗಳ ಹೇಳಿಕೆ, ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರನಿಂದ ಕಿಡ್ನಾಪ್, ದರ್ಶನ್ ಹೇಳಿದಂತೆ ರೇಣುಕಾಸ್ವಾಮಿ ಕರೆತಂದಿದ್ದೇವೆ ಎಂದು ರಘು ಹೇಳಿಕೆ ಇತರ ಸಾಕ್ಷ್ಯಗಳು ಈ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರುವುದಕ್ಕೆ ಪುಷ್ಟಿ ನೀಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.