Party ಬಿಟ್ಟು ಹೋದವರನ್ನು ವಾಪಸ್ ಸೇರಿಸಿಕೊಳ್ಳಲ್ಲ: ಉದ್ಧವ್, ಪವಾರ್
ಬಿಜೆಪಿ ನೇತೃತ್ವದ ಎನ್ಡಿಎ ಕೂಟಕ್ಕೆ ಮತ್ತೆ ಮರಳುವುದಿಲ್ಲ: ಉದ್ಧವ್ ಘೋಷಣೆ
Team Udayavani, Jun 16, 2024, 6:10 AM IST
ಮುಂಬಯಿ: ಪಕ್ಷವನ್ನು ಒಡೆದು ಹೋದವರನ್ನು ಮತ್ತೆ ವಾಪಸ್ ಸೇರಿಕೊಳ್ಳುವುದಿಲ್ಲ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಹಾಗೂ ಎನ್ಸಿಪಿ(ಎಸ್ಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ. ಈ ಮೂಲಕ ಮಹಾರಾಷ್ಟ್ರದ ಹಾಲಿ ಸಿಎಂ ಏಕನಾಥ ಶಿಂಧೆ, ಡಿಸಿಎಂ ಅಜಿತ್ ಪವಾರ್ರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡುವುದಿಲ್ಲ ಎಂದು ಇಬ್ಬರು ನಾಯಕರು ಸೂಚಿಸಿದಂತಾಗಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಮೂರೂ ಪಕ್ಷಗಳ ಸಂಸದೀಯ ಮಂಡಳಿ ಸಭೆಯಲ್ಲಿ ಪರಾಮರ್ಶೆ ನಡೆಸಿದ ಬಳಿಕ ಮುಖಂಡರು ಮುಂಬಯಿ ಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
“ಎಂಥದೇ ಪರಿಸ್ಥಿತಿಯಲ್ಲೂ ಬಿಜೆಪಿ ಗೆಲುವಿನ ಅಭಿಯಾನ ಮುಂದುರಿಸಲಿದೆ’ ಎಂಬ ಮಾತು ಎಷ್ಟು ಪೊಳ್ಳಾಗಿದೆ ಎಂಬುದನ್ನು ಲೋಕಸಭೆ ಚುನಾ ವಣೆಯಲ್ಲಿ ಜನರು ತೋರಿಸಿ ಕೊಟ್ಟಿದ್ದಾರೆ’ ಎಂದು ಉದ್ಧವ್ ವಿವರಿಸಿದ್ದಾರೆ. ಇದೇ ವೇಳೆ, ಬಿಜೆಪಿ ನೇತೃತ್ವದ ಎನ್ಡಿಎ ಕೂಟಕ್ಕೆ ಉದ್ಧವ್ ನೇತೃತ್ವದ ಶಿವಸೇನೆ ಮತ್ತೆ ಮರಳಲಿದೆ ಎಂಬ ಸುದ್ದಿಯನ್ನೂ ಅವರು ಅಲ್ಲಗಳೆದಿದ್ದಾರೆ.
ಈ ಜಯ ಪ್ರಾರಂಭ ಮಾತ್ರ: ಉದ್ಧವ್
ಲೋಕಸಭೆ ಚುನಾವಣೆಯಲ್ಲಿ ಮಹಾ ವಿಕಾಸ್ ಆಘಾಡಿ (ಎಂವಿಎ) ಜಯ ಮಹಾರಾಷ್ಟ್ರದಲ್ಲಿ ಕೇವಲ ಆರಂಭ ಮಾತ್ರ. ಶೀಘ್ರವೇ ನಡೆ ಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಒಕ್ಕೂಟವೇ ಜಯ ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮೋದಿಗೆ ಅಭಿನಂದನೆ: ಶರದ್ ಪವಾರ್ ವ್ಯಂಗ್ಯ
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಆಘಾಡಿ (ಕಾಂಗ್ರೆಸ್-ಶಿವಸೇನೆ-ಎನ್ಸಿಪಿ) ಪರವಾಗಿ ರಾಜಕೀಯ ಪರಿಸ್ಥಿತಿಯನ್ನು ಸೃಷ್ಟಿಸಿ ಕೊಟ್ಟಿದ್ದಕ್ಕೆ ನಾವು ಪ್ರಧಾನಿ ಮೋದಿಗೆ ಅಭಿನಂದನೆ ಹೇಳುತ್ತೇವೆ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ವ್ಯಂಗ್ಯವಾಡಿದರು.
ಶೀಘ್ರ ಚುನಾವಣೆಗೆ ಸಿದ್ಧತೆ: ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಪೃಥ್ವೀರಾಜ್ ಚವಾಣ್ ಅವರು, ನಮ್ಮ ಮೈತ್ರಿಕೂಟದಲ್ಲಿ ದೊಡ್ಡಣ್ಣ ಮತ್ತು ಚಿಕ್ಕಣ್ಣ ಎಂದು ಯಾರೂ ಇಲ್ಲ. ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಪ್ರತೀ ವಿಧಾನಸಭೆ ಕ್ಷೇತ್ರವನ್ನು ಗೆಲ್ಲುವುದಕ್ಕೆ ಹೋರಾಟ ನಡೆಸುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸಿದ್ಧತೆಯನ್ನು ಶೀಘ್ರವೇ ಆರಂಭಿಸುತ್ತೇವೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.