Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Team Udayavani, Jun 16, 2024, 10:53 AM IST

udupi-1

ಉಡುಪಿ: ದೇಶ ಮಟ್ಟದಲ್ಲಿ ಗುರುತಿಸಲ್ಪಟ್ಟ ಹಿರಿಯ ನರಶಸ್ತ್ರಚಿಕಿತ್ಸಕ ಪ್ರೊ| ಡಾ| ಎ. ರಾಜಾ (73) ಜೂ. 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಮೂಲತಃ ತಮಿಳುನಾಡಿನವರಾದ ಡಾ| ರಾಜಾ ಅವರು ತಮ್ಮ ಬಹು ಅಮೂಲ್ಯ ಸೇವೆಯನ್ನು ಉಡುಪಿ ಜಿಲ್ಲೆಯಲ್ಲಿ ಸಲ್ಲಿಸಿದ್ದರು. ಮದ್ರಾಸ್‌ ವಿಶ್ವವಿದ್ಯಾನಿಲಯದಲ್ಲಿ ಎಂಬಿಬಿಎಸ್‌, ನರಶಸ್ತ್ರಚಿಕಿತ್ಸೆಯಲ್ಲಿ ಎಂಎಸ್‌ ಪದವಿಯನ್ನು ಪಡೆದರು. ಮದ್ರಾಸ್‌ ವಿ.ವಿ.ಯ ನರಶಸ್ತ್ರಚಿಕಿತ್ಸೆಯ ಮೊದಲ ಎಂಎಸ್‌ ತಂಡದ ವಿದ್ಯಾರ್ಥಿ ಇವರು. ಮಣಿಪಾಲದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನಲ್ಲಿ (ಕೆಎಂಸಿ) 1979ರಲ್ಲಿ ವೃತ್ತಿ ಜೀವನ ಅರಂಭಿಸಿದ ಇವರು ಉಪನ್ಯಾಸಕ, ಪ್ರಾಧ್ಯಾಪಕ, ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ 2010ರ ವರೆಗೆ ಸೇವೆ ಸಲ್ಲಿಸಿದ್ದರು.

1992ರಲ್ಲಿ ಕೆಎಂಸಿಯಲ್ಲಿ ಎಂಸಿಎಚ್‌ ನ್ಯೂರೋಸರ್ಜರಿ ಕಾರ್ಯಕ್ರಮ ಆರಂಭಿಸಿದ್ದರು. ಇವರ ಮಾರ್ಗದರ್ಶನದಲ್ಲಿ ಹಲವರು ಸಂಶೋಧನೆಗಳನ್ನು ಕೈಗೊಂಡು ಸಂಶೋಧನ ಪ್ರಬಂಧ ಮಂಡಿಸಿದ್ದಾರೆ. ಏಮ್ಸ್‌, ಎಸ್‌ಸಿಐಎಂಸಿಟಿ ಸಹಿತ ದೇಶದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳಿಗೆ ಪರೀಕ್ಷಾ ಪರಿವೀಕ್ಷಕರಾಗಿಯೂ ಸೇವೆ ಒದಗಿಸಿದ್ದಾರೆ.

2010ರಿಂದ ಅವರು ಆದರ್ಶ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರು ಹಾಗೂ ಹಿರಿಯ ಸಮಲೋಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಣಿಪಾಲದ ರಾಷ್ಟ್ರೀಯ ನರವಿಜ್ಞಾನ ಮಿಷನ್‌ನ ಅಧ್ಯಕ್ಷರಾಗಿದ್ದರು. ನ್ಯೂರೋಲಾ ಜಿಕಲ್‌ ಸೊಸೈಟಿ ಆಫ್ ಇಂಡಿಯಾದ ಆಜೀವ ಸದಸ್ಯರಾಗಿದ್ದರು. ಐಎಸ್ಸಿವಿಎಸ್‌ ಮತ್ತು ಎನ್‌ಎಸ್‌ಐನ ಕರಾವಳಿ ಅಧ್ಯಾಯವನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2004ರಲ್ಲಿ ಅವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಡಾ| ಮುರಳೀಧರ ಪೈ ಅವರೊಂದಿಗೆ ಭಾರತದ ಮೊದಲ ಕ್ರಾನಿಯೊಫಾಗಸ್‌ ಅವಳಿ ಬೇರ್ಪಡಿಕೆ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದರು.

ಉಡುಪಿ ಮತ್ತು ದ.ಕ.ದಲ್ಲಿ ಸೂಕ್ಷ್ಮದರ್ಶಕದ ಬಳಕೆಯನ್ನು ಪರಿಚಯಿಸಿದ ಮೊದಲ ನರಶಸ್ತ್ರಚಿಕಿತ್ಸಕರಾಗಿದ್ದರು. ಈ ಪ್ರದೇಶದಲ್ಲಿ ನರಶಸ್ತ್ರಚಿಕಿತ್ಸೆಯ ಕ್ಷೇತ್ರವನ್ನು ಗಮನಾರ್ಹವಾಗಿ ಮುನ್ನಡೆಸಿದರು. ವೈದ್ಯಕೀಯ ಸಾಹಿತ್ಯಕ್ಕೆ ಅವರ ಕೊಡುಗೆಗಳು ಅಪಾರ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಇವರ ಹಲವು ಲೇಖನಗಳು ಪ್ರಕಟವಾಗಿವೆ.

ಇವರ ನಿಧನಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಅವರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.