Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ
Team Udayavani, Jun 17, 2024, 11:22 PM IST
ಮಂಗಳೂರು/ ಉಡುಪಿ: ಕರಾವಳಿಯ ವಿವಿಧೆಡೆ ಸೋಮವಾರ ರಾತ್ರಿಯ ವೇಳೆ ಸಾಧಾರಣ ಮಳೆ ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗಲಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸಂಜೆಯ ವೇಳೆ ಬೆಳ್ತಂಗಡಿ, ಪುತ್ತೂರು ಮತ್ತು ಮಂಗಳೂರು ನಗರದ ವಿವಿಧೆಡೆ ಸಾಧಾರಣ ಮಳೆಯಾಗಿದೆ.
ಮುಂಗಾರು ಅವಧಿಯಲ್ಲಿ ಸಾಮಾನ್ಯವಾಗಿ ಬಿರುಸಿನ ಮಳೆಯಾಗುತ್ತದೆ. ಆದರೆ ಈ ಬಾರಿ ಜೂ. 2ರಂದು ಕರಾವಳಿಗೆ ಕಾಲಿಟ್ಟ ಮುಂಗಾರು ಆರಂಭದಲ್ಲೇ ಕ್ಷೀಣಿಸಿತ್ತು. ಬಳಿಕ ಕೆಲವು ದಿನವಷ್ಟೇ ಬಿರುಸಿನ ಮಳೆಯಿಂದ ಕೂಡಿತ್ತು. ಮೂರ್‍ನಾಲ್ಕು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ಮುಂಗಾರಿನ ಹಿನ್ನಡೆ ಉಂಟಾಗಿದೆ. ಈ ನಡುವೆ ತಾಪಮಾನವೂ ಏರಿಕೆ ಕಂಡಿದ್ದು, ಸೆಕೆಯ ವಾತಾವರಣ ಇದೆ. ಮಂಗಳೂರಿನಲ್ಲಿ 31.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.6 ಡಿ.ಸೆ. ಮತ್ತು 24.5 ಮಿ.ಮೀ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.1 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು.
ನಾಲ್ಕು ದಿನ “ಎಲ್ಲೋ ಅಲರ್ಟ್’
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜೂ.18ರಿಂದ 21ರ ವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಗಾಳಿಯಿಂದ ಕೂಡಿದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ಜಿಲ್ಲೆಯಲ್ಲಿ
ಉಡುಪಿ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಪ್ರಮಾಣ ಕಡಿಮೆ ಯಾಗಿದ್ದು, ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಅಲ್ಲಲ್ಲಿ ಸಣ್ಣದಾಗಿ ಮಳೆಯಾಗಿದೆ. ರವಿವಾರ ತಡರಾತ್ರಿ, ಸೋಮ ವಾರ ಮುಂಜಾನೆ ಹೆಬ್ರಿ, ಕುಂದಾಪುರ, ಬೈಂದೂರು ಭಾಗದಲ್ಲಿ ಮಳೆಯಾಗಿದೆ.
ಕಳಸ-ಬಾಳೆಹೊನ್ನೂರು: ಭಾರೀ ಮಳೆ
ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಕಳಸ-ಬಾಳೆಹೊನ್ನೂರು ಸಂಪರ್ಕ ರಸ್ತೆ ಮೇಲೆ ನೀರು ಹರಿದ ಪರಿಣಾಮ ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ.
ಸೋಮವಾರ ಸಂಜೆ ಬಾಳೆಹೊನ್ನೂರು ಸಮೀಪದ ಮಾಗುಂಡಿ ಪರಿಸರದಲ್ಲಿ ಭಾರೀ ಮಳೆ ಸುರಿದಿದೆ. ಮಹಲ್ಗೊಡು ಗ್ರಾಮದ ಸಣ್ಣ ಹಳ್ಳ ಏಕಾಏಕಿ ತುಂಬಿ ಹರಿದಿದೆ. ಈ ಹಳ್ಳ ಕಳಸ- ಬಾಳೆಹೊನ್ನೂರು ಸಂಪರ್ಕದ ಹೆದ್ದಾರಿ ಮಧ್ಯೆ ಇರುವ ಮೋರಿ ಮೂಲಕ ಭದ್ರಾ ನದಿ ಸೇರುತ್ತದೆ. ಈ ಮೋರಿಯಲ್ಲಿ ಹೂಳು ತುಂಬಿದ ಪರಿಣಾಮ ಮಳೆ ನೀರು ಮೋರಿ ಮೂಲಕ ಹರಿಯದೆ ರಸ್ತೆ ಮೇಲೆಯೇ ಉಕ್ಕಿ ಹರಿದಿದೆ. ಈ ವೇಳೆ ರಸ್ತೆ ಮೇಲಿದ್ದ ಎರಡು ಹಸುಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ರಸ್ತೆ ಮೇಲೆ ಬರುತ್ತಿದ್ದ ಕಾರೊಂದು ನೀರಿನಲ್ಲಿ ಸಿಲುಕಿದ್ದು, ಸ್ಥಳೀಯರು ಕಾರನ್ನು ಸುರಕ್ಷಿತವಾಗಿ ದಡ ಸೇರಿಸಿದ್ದಾರೆ. ಕಳಸ- ಬಾಳೆಹೊನ್ನೂರು ರಸ್ತೆ ಮೇಲೆ ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತು ರಸ್ತೆ ಸಂಪರ್ಕ ಕಡಿತಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.