Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ
ಅಂತರ ಕಾಯ್ದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ;ಯಾರ ಪರವೂ ಒಲವು ತೋರದಂತೆ ಡಿ.ಕೆ. ಶಿವಕುಮಾರ್ ಸೂಚನೆ
Team Udayavani, Jun 18, 2024, 12:27 AM IST
ಬೆಂಗಳೂರು: ನಟ ದರ್ಶನ್ ಪ್ರಕರಣದಲ್ಲಿ ಕಾನೂನು ಪ್ರಕಾರ ಮುಂದುವರಿಯಿರಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪೊಲೀಸರಿಗೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ರಾಜಕೀಯ ಒತ್ತಡವಿದೆ ಎಂಬ ವದಂತಿ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಅಂತರ ಕಾಯ್ದುಕೊಳ್ಳುವುದಕ್ಕೆ ಸಿದ್ದರಾಮಯ್ಯ ನಿರ್ಧರಿಸಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ಪ್ರಕಾರ ನಡೆದುಕೊಳ್ಳಿ ಎಂದಿದ್ದಾರೆ.
ಈ ಪ್ರಕರಣದಲ್ಲಿ ಸಾಂದರ್ಭಿಕ ಹಾಗೂ ವೈಜ್ಞಾನಿಕ ಸಾಕ್ಷಿಗಳು ದರ್ಶನ್ ವಿರುದ್ಧ ಇವೆ. ಆತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂಬುದಕ್ಕೆ ಪೂರಕವಾದ ದಾಖಲೆಗಳು ಪೊಲೀಸರಿಗೆ ಲಭ್ಯವಾಗಿವೆ. ಇವೆಲ್ಲದರ ಮಧ್ಯೆ ಪೊಲೀಸರ ಮೇಲೆ ರಾಜಕೀಯ ಒತ್ತಡ ಇದೆ ಎಂಬ ವದಂತಿ ಹರಿದಾಡತೊಡಗಿದ್ದವು. ವಿಪಕ್ಷಗಳು ಮೇಲಿಂದ ಮೇಲೆ ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದವು.
ದರ್ಶನ್ ಪ್ರಕರಣದಲ್ಲಿ ಯಾರ ರಕ್ಷಣೆಯೂ ಇಲ್ಲ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸು ವುದಾಗಲಿ ಯಾರ ಬಗ್ಗೆಯೂ ಮೃದುಧೋರಣೆ ಆಗಲಿ ಇಲ್ಲ.ಮುಲಾಜಿಲ್ಲದೆ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತನಿಖೆ ಆಗುವವರೆಗೂ ಬಹಿರಂಗ ಹೇಳಿಕೆ ನೀಡಲಾ ಗದು. ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಮತ್ತು ಮುಖ್ಯಮಂತ್ರಿ ಈಗಾಗಲೇ ಹೇಳಿದ್ದೇವೆ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ… ಮರುನೇಮಕ ಕುರಿತು ಮಾತನಾಡಿ, ಆಡಳಿತಾತ್ಮಕವಾಗಿ ಏನು ಅಗತ್ಯ ಇದೆಯೋ ಅದನ್ನು ಮಾಡುತ್ತೇವೆ. ಸಮರ್ಥರು ಯಾರಿದ್ದಾ ರೆ ಎಂಬುದನ್ನು ಪರಿಗಣಿಸಿ ಅಧಿಕಾರಿಗಳೇ ಮರುನೇಮಕ ಮಾಡಿಕೊಳ್ಳುತ್ತಾರೆ. ನಾವ್ಯಾರೂ ಸೂಚನೆ ಕೊಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.