RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು
ಶಿವನಗೌಡರನ್ನು ಬೆಂಗಳೂರಿಗೆ ಕರೆಸಿಕೊಂಡು ಮಾಹಿತಿ ಪಡೆದ ಪೊಲೀಸರು
Team Udayavani, Jun 18, 2024, 12:41 AM IST
ಚಿತ್ರದುರ್ಗ: ಪುತ್ರನ ಕೊಲೆ ಪ್ರಕರಣದ ಸಂಬಂಧ ರೇಣುಕಾಸ್ವಾಮಿಯ ತಂದೆ ಶಿವನಗೌಡ ಅವರನ್ನು ಪೊಲೀಸರು ಜೂ. 14ರ ಶುಕ್ರವಾರವೇ ಬೆಂಗಳೂರಿಗೆ ಕರೆಸಿಕೊಂಡು ಪುತ್ರನ ಬಗ್ಗೆ ಮಾಹಿತಿ ಪಡೆದುಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಅವರ ಹೇಳಿಕೆಯನ್ನು ಆಧರಿಸಿ ಮತ್ತೊಮ್ಮೆ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆತಂದು ಮಹಜರು ನಡೆಸಿದ್ದಾರೆ.
ಪುತ್ರನ ಬಳಿ ಏನೇನಿತ್ತು ಎನ್ನುವ ಬಗ್ಗೆ ವಿಚಾರಿಸಿದಾಗ ಬಂಗಾರದ ಸರ, ಉಂಗುರ ಹಾಗೂ ಬೆಳ್ಳಿಯ ಕರಡಿಗೆ (ಇಷ್ಟಲಿಂಗ ಇಡುವ ಸಾಧನ) ಇತ್ತು ಎಂದಿದ್ದಾರೆ. ಈಗಾಗಲೇ ಎ 4 ಆರೋಪಿ ರಾಘವೇಂದ್ರನನ್ನು ಚಿತ್ರದುರ್ಗಕ್ಕೆ ಕರೆತಂದು ಮಹಜರು ನಡೆಸಿದ್ದರೂ ಶಿವನಗೌಡರು ನೀಡಿದ ಆಭರಣಗಳ ಮಾಹಿತಿಯ ಜಾಡು ಹಿಡಿದು ಮತ್ತೆ ಚಿತ್ರದುರ್ಗಕ್ಕೆ ಬಂದಿದ್ದು, ರಾಘವೇಂದ್ರನ ಮನೆಯಲ್ಲಿ ತಪಾಸಣೆ ಮಾಡಿದಾಗ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿವೆ ಎನ್ನಲಾಗುತ್ತಿದೆ.
ಶಿವನಗೌಡರು ಪೊಲೀಸರ ಬಳಿ, ನಿಮ್ಮ ಭುಜದ ಮೇಲಿರುವ ಸ್ಟಾರ್ ಹಾಗೂ ಕುರ್ಚಿಗೆ ಗೌರವ ಕೊಡುತ್ತೇನೆ ಸ್ವಾಮಿ, ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಬೇಡಿಕೊಂಡಿದ್ದಾರೆ. ಪೊಲೀಸರು ಧೈರ್ಯವಾಗಿರಿ ಎಂದು ಭರವಸೆ ತುಂಬಿ ಕಳುಹಿಸಿದ್ದಾರೆ.
ರೇಣುಕಸ್ವಾಮಿ ಕೈಲಾಸ ಶಿವಗಣಾರಾಧನೆ
ಕೊಲೆಯಾದ ರೇಣುಕಾಸ್ವಾಮಿ ಕೈಲಾಸ ಶಿವಗಣಾರಾಧನೆ ಸೋಮವಾರ ಚಿತ್ರದುರ್ಗದ ವಿಆರ್‌ಎಸ್ ಬಡಾವಣೆಯಲ್ಲಿರುವ ನಿವಾಸದಲ್ಲಿ ನಡೆಯಿತು. ನೂರಾರು ಮಂದಿ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.