ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಶೇ. 12 ಏರಿಕೆ ಸಾಧ್ಯತೆ; ಪ್ರಯಾಣಿಕರಿಗೆ ಬಿಸಿ ಸುದ್ದಿ?

Team Udayavani, Jun 18, 2024, 7:20 AM IST

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ಪೆಟ್ರೋಲ್‌-ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಳದ ಬೆನ್ನಲ್ಲೇ ಅದ ರಿಂದಾಗುತ್ತಿರುವ ಹೊರೆ ತಗ್ಗಿಸಿಕೊಳ್ಳಲು ಪ್ರಯಾಣ ದರ ಹೆಚ್ಚಳಕ್ಕೆ ಮುಂದಾಗಿರುವ ನಾಲ್ಕೂ ಸಾರಿಗೆ ನಿಗಮಗಳು ಈ ಸಂಬಂಧ ದರ ಪರಿಷ್ಕರಣೆಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಈ ಮೂಲಕ ಬಸ್‌ ಪ್ರಯಾಣಿಕರಿಗೂ ತೆರಿಗೆ ಹೊರೆಯ ಬಿಸಿ ತಟ್ಟುವ ಸಾಧ್ಯತೆ ಕಂಡುಬಂದಿದೆ. ಶೇ. 25ರಷ್ಟು ಬೆಲೆಯೇರಿಕೆ ಪ್ರಸ್ತಾವನೆ ಸಲ್ಲಿಸ ಲಾಗಿದ್ದು, ಸರಕಾರ ಒಪ್ಪಿಗೆ ಸೂಚಿಸಿದರೆ ಶೇ. 12ರಷ್ಟು ಏರಿಕೆಯಾಗುವ ಅಂದಾಜಿದೆ.

ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಹಿತ ನಾಲ್ಕೂ ನಿಗಮಗಳು ಆಗಲಿರುವ ಹೊರೆ ಮತ್ತು ಪ್ರಸ್ತುತ ಆರ್ಥಿಕ ಸ್ಥಿತಿಗತಿಯನ್ನು ಲೆಕ್ಕಹಾಕಿ ಸರಾಸರಿ ಶೇ. 25ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಒಂದು ವೇಳೆ ಯಥಾವತ್ತಾದ ಪ್ರಸ್ತಾವನೆಗೆ ಅಸ್ತು ಎಂದರೆ ನಿತ್ಯ ಸರಾಸರಿ 5ರಿಂದ 6 ಕೋಟಿ ರೂ. ಆದಾಯ ಹೆಚ್ಚಳವಾಗುವ ನಿರೀಕ್ಷೆ ಇದೆ. ಆದರೆ ಆ ಪೈಕಿ ಅರ್ಧಕ್ಕರ್ಧ ಹೊರೆಯನ್ನು ಸರಕಾರವೇ ಹೊರಬೇಕಾಗುತ್ತದೆ.

ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ಒಟ್ಟು ಪ್ರಯಾಣಿಕರ ಪೈಕಿ ಶೇ. 58ರಷ್ಟು ಮಹಿಳೆಯರು. ಅವರ ಪ್ರಯಾಣ ವೆಚ್ಚವನ್ನು “ಶಕ್ತಿ’ ಯೋಜನೆ ಅಡಿ ಸರಕಾರವೇ ಭರಿಸುತ್ತಿದೆ. ಒಂದು ವೇಳೆ ಪ್ರಸ್ತಾವನೆಯಂತೆ ಪ್ರಯಾಣ ದರವನ್ನು ಶೇ. 25ರಷ್ಟು ಹೆಚ್ಚಳ ಮಾಡಿದರೆ, ಅದರಿಂದ ನಿತ್ಯ 5-6 ಕೋಟಿ ರೂ. ಆದಾಯವಂತೂ ಹೆಚ್ಚಳ ಆಗುತ್ತದೆ. ಇದರಲ್ಲೂ ಅರ್ಧದಷ್ಟನ್ನು ಶಕ್ತಿ ಯೋಜನೆಯಡಿ ಸರಕಾರವೇ ಕೊಡಬೇಕಿದೆ.

ಪ್ರಸ್ತಾವನೆಯ ಅರ್ಧದಷ್ಟು ಅಂದರೆ ಶೇ. 10ರಿಂದ 12ರಷ್ಟು ದರ ಏರಿಕೆಗೆ ಅನುಮತಿ ನೀಡಿದರೂ ನಿಗಮಗಳಿಗೆ ಬರುವ ಆದಾಯ ದಿನಕ್ಕೆ 2.50ರಿಂದ 3 ಕೋಟಿ ರೂ. ಆಗುತ್ತದೆ. ವಾರ್ಷಿಕ 1,100-1,200 ಕೋಟಿ ರೂ. ಆಗಲಿದೆ. ಇದರಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣ ದರ ಶೇ. 55-60ರಷ್ಟು ಎಂದು ಲೆಕ್ಕ ಹಾಕಿದರೂ ವಾರ್ಷಿಕ 550-600 ಕೋಟಿ ರೂ. ಆಗುತ್ತದೆ. ಒಟ್ಟಾರೆಯಾಗಿ ತೈಲ ದರ ಏರಿಕೆಯಿಂದ 3 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ. ಈ ಪೈಕಿ ಶೇ. 20ರಷ್ಟು “ಶಕ್ತಿ’ ಯೋಜನೆ ಅಡಿ ನಿಗಮಗಳಿಗೆ ಪಾವತಿಸಬೇಕಾಗುತ್ತದೆ ಎಂದು ಕೆಎಸ್ಸಾರ್ಟಿಸಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಈ ಹಿಂದೆ ಬಸ್‌ ಪ್ರಯಾಣ
ದರ ಪರಿಷ್ಕರಣೆ ಯಾವಾಗ ಆಗಿತ್ತು ಗೊತ್ತಾ? ಬಸ್‌ ಪ್ರಯಾಣ ದರ ಪರಿಷ್ಕರಣೆ ಸದ್ಯಕ್ಕಿಲ್ಲ. ಆದರೆ ಈ ಕುರಿತು ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ಮಾಡಲಾಗುವುದು.
-ಸಿದ್ದರಾಮಯ್ಯ, ಸಿಎಂ

-ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.