Horse racing: ಕುದುರೆ ಪಂದ್ಯ ಆಯೋಜನೆಗೆ ಷರತ್ತು ಬದ್ಧ ಅನುಮತಿ
Team Udayavani, Jun 19, 2024, 11:59 AM IST
ಬೆಂಗಳೂರು: ನಗರದ ಬೆಂಗಳೂರು ಟರ್ಪ್ ಕ್ಲಬ್ ನಲ್ಲಿ (ರೇಸ್ ಕೋರ್ಸ್) ಷರತ್ತುಗಳನ್ನು ಆಧರಿಸಿ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಹೈಕೋಟ್ ಅನುಮತಿ ನೀಡಿ ಆದೇಶಿಸಿದೆ. ಕುದುರೆ ಪಂದ್ಯಗಳ ಆಯೋಜನೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಕರ್ನಾಟಕ ಟ್ರೈನರ್ಸ್ ಅಸೋಸಿ ಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರನೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಈ ಆದೇಶ ಮಾಡಿದ್ದಾರೆ.
ರಾಜ್ಯ ಸರ್ಕಾರ 2024ರ ಮಾರ್ಚ್ ತಿಂಗಳಲ್ಲಿ ಅನುಮತಿ ನೀಡಿದ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡವುದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಆನ್ ಸ್ಕೋಟರ್ (ಬೆಂಗಳೂರಿನಲ್ಲಿ ನಡೆಯುವ ಪಂದ್ಯ) ಮತ್ತು ಆಫ್ ಕೋರ್ಸ್ (ಹೊರಭಾಗಗಳಲ್ಲಿ ಮೈಸೂರು, ಬಾಂಬೆ ನಡೆಯುವ ಪಂದ್ಯಗಳು)ಗಳನ್ನು ಬಿಟಿಸಿ ಹಮ್ಮಿಕೊಳ್ಳಬಹುದಾಗಿದೆ.
ಅದೇ ರೀತಿ ರಾಜ್ಯ ಸರ್ಕಾರವು ಕುದುರೆ ಪಂದ್ಯಗಳ ಆಯೋಜನೆ ವೇಳೆ ಅದರ ಮೇಲ್ವಿಚಾರಣೆ ಮತ್ತು ನಿಯಂತ್ರಣವವನ್ನು ಮಾಡಬಹುದಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಈ ಆದೇಶದಿಂದಾಗಿ ಕಳೆದ ಮೂರು ತಿಂಗಳನಿಂದ ಸ್ಥಗಿತಗೊಂಡಿದ್ದ ಕುದುರೆ ಪಂದ್ಯಾವಳಿಗಳು ಪುನಾರಂಭವಾಗಲಿದೆ. ಅರ್ಜಿಯ ಕುರಿತಂತೆ ಈ ಹಿಂದೆ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರೇಸ್ ಕೋರ್ಸ್ ಅಕ್ರಮಗಳ ತಾಣವಾಗಿದೆ.
ಪ್ರತಿದಿನ ಕೋಟ್ಯಂತರ ರೂ.ಗಳ ಅವ್ಯವಹಾರ ನಡೆಯುತ್ತಿದೆ. ಜತೆಗೆ, ತೆರಿಗೆ ವಂಚನೆಗೆ ಬುಕ್ಕಿಗಳು ಪ್ರಯತ್ನ ಮಾಡುತ್ತಿದ್ದು, ದಾಳಿ ಸಂದರ್ಭದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾಮಾನ್ಯ ಜನ ಕುದುರೆ ಪಂದ್ಯಗಳಲ್ಲಿ ತೊಡಗಿ ಜೀವನ ನಡೆಸುವುದಕ್ಕೆ ಪರದಾಡುತ್ತಿದ್ದಾರೆ, ಆಟೋ ಚಾಲಕರು ತಮ್ಮ ದುಡಿಮೆಯನ್ನು ಪಂದ್ಯಗಳಲ್ಲಿ ವ್ಯಯ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರ ಪಂದ್ಯಗಳ ಆಯೋಜನೆಗೆ ಅನುಮತಿ ನಿರಾಕರಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ರೇಸ್ ಕೋರ್ಸ್ ಪರ ವಕೀಲರು, ರೇಸ್ ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಣಕಾಸು ಕಾರ್ಯದರ್ಶಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸದಸ್ಯರಾಗಿದ್ದಾರೆ. ಕುದುರೆ ಪಂದ್ಯಗಳ ಆಯೋಜನೆಯ ಎಲ್ಲ ಚಟುವಟಿಕೆಗಳು ಸರ್ಕಾರದ ಗಮನಕ್ಕೆ ಇರುತ್ತವೆ. ಅಕ್ರಮಗಳು ನಡೆಸುವ ಸಾಧ್ಯತೆಗಳು ಇಲ್ಲ ಎಂದು ವಿವರಿಸಿದರು.
ತೆರಿಗೆ ವಂಚನೆಗಾಗಿ ಅಕ್ರಮವಾಗಿ ಬೆಟ್ಟಿಂಗ್ ಮಾಡಿದ ಆರೋಪದಲ್ಲಿ ಆರೋಪ ಪಟ್ಟಿ ದಾಖಲಿಸಿರುವ ಬುಕ್ಕಿಗಳ ಪರವಾನಗಿಯನ್ನು ರದ್ದು ಪಡಿಸುವುದಕ್ಕಾಗಿ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಕುದುರೆ ಪಂದ್ಯಗಳ ಆಯೋಜನೆಯಲ್ಲಿ ಬುಕ್ಕಿ ಕಂಪೆನಿಗಳಿಗೆ ಯಾವುದೇ ಸಂಬಂಧವಿರುವುದಿಲ್ಲ. ಹೀಗಾಗಿ ಕುದುರೆ ಪಂದ್ಯಗಳ ಆಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.
ಜತೆಗೆ, ನಿತ್ಯ 1ಕೋಟಿಗಿಂತಲೂ ಹೆಚ್ಚು ರೂ. ತೆರಿಗೆ ಸಂಗ್ರಹವಾಗುತ್ತಿದೆ. ಇದು ಸರ್ಕಾರದ ಬೊಕ್ಕಸಕ್ಕೆ ಸೇರುತ್ತಿದೆ. ಕುದುರೆ ಪಂದ್ಯಗಳಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನ ಇದನ್ನು ಅವಲಂಬಿಸಿದ್ದಾರೆ. ಆದ್ದರಿಂದ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.