Dharmsthala ಯೋಜನೆ ವತಿಯಿಂದ ರಾಜ್ಯಾದ್ಯಂತ 770 ಕೆರೆ ಪುನಶ್ಚೇತನ: ಆನಂದ್‌ ಸುವರ್ಣ


Team Udayavani, Jun 19, 2024, 2:51 PM IST

13-

ಹುಣಸೂರು: ಎಸ್.ಕೆ.ಡಿ.ಆರ್.ಡಿ.ಪಿ. ವತಿಯಿಂದ ನಮ್ಮೂರು ನಮ್ಮಕೆರೆ ಯೋಜನೆಯಡಿ ರಾಜ್ಯಾದ್ಯಂತ ಈವರೆಗೆ 55 ಕೋಟಿ ವೆಚ್ಚದಡಿ 770 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ದಿ ವಿಭಾಗದ ಪ್ರಾದೇಶಿಕ ನಿರ್ಧೇಶಕ ಆನಂದ್‌ಸುವರ್ಣ ತಿಳಿಸಿದರು.

ತಾಲೂಕಿನ ಯಮಗುಂಬದಲ್ಲಿ ಯೋಜನೆ ವತಿಯಿಂದ ಪುನಶ್ಚೇತನಗೊಳಿಸಿರುವ ಹಳೆಕೆರೆಯನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿ, ತುಂಬಿದ ಕೆರೆಗೆ ಬಾಗಿನ ಅರ್ಪಿಸಿ, ನಾಮಪಲಕ ಅನಾವರಣಗೊಳಿಸಿದ ನಂತರ ಮಾತನಾಡಿದರು.

ನಾಡಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುವ ಬರಗಾಲದ ಹಿನ್ನೆಲೆಯಲ್ಲಿ ಜಲ ಸಂರಕ್ಷಿಸುವ ಉದ್ದೇಶದಿಂದ ರಾಜ ಮಹಾರಾಜರ ಕಾಲದಲ್ಲಿ ನಿರ್ಮಿಸಿರುವ ಕೆರೆ-ಕಟ್ಟೆಗಳನ್ನು ಸಮುದಾಯ, ಸರಕಾರದ ಬೆಂಬಲದೊಂದಿಗೆ ಪುನಶ್ಚೇತನಗೊಳಿಸಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ-ಹೇಮಾವತಿ ವಿ. ಹೆಗ್ಗಡೆ ನಮ್ಮೂರು ನಮ್ಮ ಕೆರೆ ಯೋಜನೆಯನ್ನು 2014 ರಲ್ಲಿ ಹುಟ್ಟು ಹಾಕಿದ್ದಾರೆ ಎಂದರು.

ಗ್ರಾಮಸ್ಥರು, ಗ್ರಾ.ಪಂ. ಸರಕಾರದ ಸಹಭಾಗಿತ್ವದಲ್ಲಿ ಈವರೆಗೆ 770 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಇದರಿಂದ ಜೀವಜಲ ಸಂರಕ್ಷಣೆ, ಹೂಳೆತ್ತುವುದರಿಂದ ನೀರಿನ ಸಂರಕ್ಷಣೆಯಾಗಿ ಜಾನುವಾರು, ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗಿದೆ. ಕೆರೆ ಸುತ್ತಮುತ್ತಲ ಪ್ರದೇಶದ ಬೋರ್‌ವೆಲ್‌ಗಳು ಪುನಶ್ಚೇತನಗೊಂಡಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 36 ಸಾವಿರಕ್ಕೂ ಹೆಚ್ಚು ಕೆರೆಗಳಿದ್ದು, ಅನೇಕ ಕಡೆಗಳಲ್ಲಿ ಕೆರೆ ಅತಿಕ್ರಮಣ, ತ್ಯಾಜ್ಯ ವಸ್ತುಗಳ ಸಂಗ್ರಹಣೆಯ ತಾಣವಾಗಿವೆ. ತಿಪ್ಪೆಗುಂಡಿಗಳಾಗಿವೆ. ಕೆರೆ ಅಭಿವೃಧ್ದಿ ಸಮಿತಿ ರಚಿಸಿಕೊಂಡು ಅದರ ಸಹಭಾಗಿತ್ವದಲ್ಲಿ ಕೆರೆಗಳ ಪುನಶ್ಚೇತನವನ್ನು ಆದ್ಯತೆಯಾಗಿಸಿಕೊಂಡು ಯೋಜನೆ ರೂಪಿಸಲಾಗಿದೆ. ಸಮಿತಿಯು ಕೆರೆಗಳು ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಕೆರೆಗಳ ಸುತ್ತ ಹಣ್ಣು, ಹೂಗಳ ಸಸಿ ನೆಟ್ಟು ಪೋಷಿಸಬೇಕೆಂದರು.

97 ಸಾವಿರ ವಿದ್ಯಾರ್ಥಿಗಳಿಗೆ ವೇತನ:

ವಿದ್ಯಾನಿಧಿ ಯೋಜನೆಯಡಿ ರಾಜ್ಯಾದ್ಯಂತ 97 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 18 ಸಾವಿರ ಅನಾಥರಿಗೆ ತಲಾ ಸಾವಿರ ರೂ. ಮಾಶಾಸನ, 500 ಕ್ಕೂ ಹೆಚ್ಚು ಮಂದಿ ನಿರ್ಗತಿಕರಿಗೆ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣ, ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿ ಡೇರಿ ಕಟ್ಟಡ, ದೇವಾಲಯ, ಸಮುದಾಯ ಭವನ ನಿರ್ಮಾಣಕ್ಕೆ ನೆರವು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಕೊತ್ತೇಗಾಲ ಗ್ರಾ.ಪಂ. ಕಾರ್ಯದರ್ಶಿ ಆನಂದ್ ಪುನಶ್ಚೇತನಗೊಳಿಸಿರುವ ಈ ಕೆರೆಯ ಸುತ್ತ ವಾಕಿಂಗ್‌ ಪಾಥ್ ನಿರ್ಮಿಸಲಾಗುವುದೆಂದರು. ನಿವೃತ್ತ ಶಿಕ್ಷಕ ಎಸ್.ಎಲ್. ಮಹದೇವಪ್ಪ ಯೋಜನೆ ವತಿಯಿಂದ ಗ್ರಾಮದ ಕೊಳವನ್ನು ಪುನಶ್ಚೇತನಗೊಳಿಸುವಂತೆ ಮನವಿ ಮಾಡಿದರು.

ಕೆರೆ ಸಮಿತಿ ಅಧ್ಯಕ್ಷ ಬಸವರಾಜಪ್ಪ ಕೆರೆ ಅಭಿವೃದ್ದಿಯಿಂದ ಬರಗಾಲ ಬಂದರೂ ನೀರಿಗೆ ತೊಂದರೆ ಇಲ್ಲವೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ಮುರಳೀಧರ್, ನಿರ್ದೇಶಕ ಶಿವಾನಂದ ಆಚಾರ್ಯ, ಕೆರೆ ಇಂಜಿನಿಯರ್ ಪುಷ್ಪರಾಜ್, ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ, ಗ್ರಾ.ಪಂ .ಸದಸ್ಯರಾದ ಸುಂದರಾಚಾರ್ಯ, ಮಹದೇವ ಶೆಟ್ಟಿ, ಯಜಮಾನ್ ಚಂದ್ರಶೆಟ್ಟಿ, ಕೃಷಿ ಮೇಲ್ವಿಚಾರಕ ಅಣ್ಣಪ್ಪ, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ರೂಪಾ, ಸೇವಾ ಪ್ರತಿನಿಧಿ ಮಂಜುಳ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.