Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕ ಹಲ್ಲೆ; ಓರ್ವ ಸಾವು
Team Udayavani, Jun 19, 2024, 3:33 PM IST
ಪಣಜಿ: ಹಳೆ ದ್ವೇಷದಿಂದ ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಗಾಯಗೊಂಡಿದ್ದ ಅಹಮ್ಮದ್ ದೇವಡಿ (30, ಮಾಪ್ಸಾ) ಗೋವಾ ವೈದ್ಯಕೀಯ ಕಾಲೇಜು ಬಾಂಬೋಲಿಂ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಜೂ.18ರ ಮಂಗಳವಾರ ಮೃತಪಟ್ಟಿದ್ದಾನೆ.
ಈ ದಾಳಿಯಲ್ಲಿ ಸಂದೇಶ ಸಾಲ್ಕರ್ ಎಂಬ ಮತ್ತೊಬ್ಬ ಯುವಕ ಕೂಡ ಗಾಯಗೊಂಡಿದ್ದ. ಮೇ 30 ರಂದು ಈ ದಾಳಿ ನಡೆದಿತ್ತು. ಈ ಪ್ರಕರಣದಲ್ಲಿ 6 ಜನ ಶಂಕಿತರನ್ನು ಮಾಪ್ಸಾ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆಯೇ ಇನ್ನೋರ್ವ ಶಂಕಿತ ರಾಮಕೃಷ್ಠ ಭಲೇಕರ್ ಅಲಿಯಾಸ್ ಆರ್‍ಕೆ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರ್‍ಕೆ ಯನ್ನು ಹುಡುಕಲು ವಿಶೇಷ ಪೊಲೀಸ್ ತಂಡವನ್ನು ಕರ್ನಾಟಕಕ್ಕೆ ಕಳುಹಿಸಲಾಗಿತ್ತು. ಆದರೆ ಅಲ್ಲಿಯೂ ಅವನ ಪತ್ತೆಯಾಗಿಲ್ಲ. ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಇನ್ಸ್ ಪೆಕ್ಟರ್ ನಿಖಿಲ್ ಪಾಲೇಕರ್ ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಶರಣ ಬಾಬು ಗೈಡಕವಾಡ, ನಾಗರಾಜ ಪೂಜಾರಿ, ಬೋರೇಶ್ ಪೂಜಾರಿ, ಶ್ರೀಧರ್ ಕಿಲ್ಲೆದಾರ್, ಅಭಿಷೇಕ್ ಪೂಜಾರಿ, ಮಂಥನ್ ಚಿಯಾರಿ ಒಳಗೊಂಡಿದ್ದಾರೆ. ಪೊಲೀಸರು ಈ ಪ್ರಕರಣದ ಹೆಚ್ಚಿನ ತನಿಖಾ ಕಾರ್ಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.