Pen Drive Case; ಪ್ರಜ್ವಲ್‌ ರೇವಣ್ಣ ಮತ್ತೆ 8 ದಿನ ಎಸ್‌ಐಟಿ ವಶಕ್ಕೆ


Team Udayavani, Jun 19, 2024, 8:53 PM IST

Pen Drive Case; ಪ್ರಜ್ವಲ್‌ ರೇವಣ್ಣ ಮತ್ತೆ 8 ದಿನ ಎಸ್‌ಐಟಿ ವಶಕ್ಕೆ

ಬೆಂಗಳೂರು: ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು 8 ದಿನಗಳ ಕಾಲ ಎಸ್‌ಐಟಿ ಮತ್ತೆ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಯಲ್ಲಿ ದಾಖಲಾಗಿರುವ 3ನೇ ಪ್ರಕರಣದಲ್ಲಿ ವಿಚಾರಣೆ ನಡೆಸಬೇಕಾದ ಹಿನ್ನೆಲೆಯಲ್ಲಿ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್‌ರನ್ನು 8 ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದೆ.

ಬಾಡಿ ವಾರಂಟ್‌ ಮೇಲೆ ವಶಕ್ಕೆ ಪಡೆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಪ್ರಜ್ವಲ್‌ ರೇವಣ್ಣ ಅವರನ್ನು ಸಿಐಡಿ ಕಚೇರಿಯಲ್ಲಿರುವ ಎಸ್‌ಐಟಿ ವಿಭಾಗಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ. ಕೆ.ಆರ್‌.ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಸ್ಥಳ ಮಹಜರು, ಹೇಳಿಕೆ ದಾಖಲು, ವಾಯ್ಸ… ಸ್ಯಾಂಪಲ್ , ವೈದ್ಯಕೀಯ ಪರೀಕ್ಷೆ ನಡೆಸಲು ವಶಕ್ಕೆ ಪಡೆಯಲಾಗಿದೆ.

ಇನ್ನೂ 1 ಪ್ರಕರಣದಲ್ಲಿ ವಿಚಾರಣೆ ಬಾಕಿ ಇದೆ:
ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿಯಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದೀಗ 8 ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ನನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಗಳಿವೆ. ಇದಾದ ನಂತರ 4ನೇ ಪ್ರಕರಣದಲ್ಲಿ ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಪ್ರಜ್ವಲ್‌ ವಿರುದ್ಧದ 2ನೇ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಎಸ್‌ಐಟಿ ಮಂಗಳವಾರಷ್ಟೆ (ಜೂ. 18) ಕೋರ್ಟ್‌ಗೆ ಹಾಜರುಪಡಿಸಿತ್ತು. ಕೋರ್ಟ್‌ ಪ್ರಜ್ವಲ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.