Renuka Swamy Case: ಸತತ 4 ತಾಸು ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿಚಾರಣೆ
Team Udayavani, Jun 19, 2024, 9:15 PM IST
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪತಿ ದರ್ಶನ್ ಬಂಧನದ ಬೆನ್ನಲ್ಲೇ ಆತನ ಪತ್ನಿ ವಿಜಯಲಕ್ಷ್ಮೀಯನ್ನು ಬುಧವಾರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕೃತ್ಯದ ದಿನ ದರ್ಶನ್ ಧರಿಸಿದ್ದ ಶೂಗಳನ್ನು ವಿಜಯಲಕ್ಷಿ$¾à ಅವರ ಮನೆಯಲ್ಲಿ ಕೆಲಸದವರು ಇಟ್ಟು ಹೋಗಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಜತೆಗೆ ಕೃತ್ಯವೆಸಗಿದ ಮರುದಿನ ಅವರು ಆ ಮನೆಗೆ ಹೋಗಿದ್ದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀಗೆ ನೋಟಿಸ್ ನೀಡಲಾಗಿತ್ತು. ಅವರು ಠಾಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ 1ರ ಸುಮಾರಿಗೆ ಅನ್ನಪೂರ್ಣೇಶ್ವರಿನಗರ ಠಾಣೆಗೆ ಬಂದ ವಿಜಯಲಕ್ಷ್ಮೀಯನ್ನು ಸಂಜೆ ನಾಲ್ಕರ ವರೆಗೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದರು. ದರ್ಶನ್ ಧರಿಸಿದ್ದ ಶೂಗಳನ್ನು ತಂದು ಕೊಟ್ಟವರಾರು? ಕೃತ್ಯದ ಬಗ್ಗೆ ನಿಮ್ಮೊಂದಿಗೆ ಏನಾದರು ಹೇಳಿಕೊಂಡಿದ್ದರೇ? ಪವಿತ್ರಾ ಗೌಡ ಮತ್ತು ದರ್ಶನ್ ನಡುವಿನ ಸಂಬಂಧದ ಬಗ್ಗೆ ತಮಗೆ ಮೊದಲೇ ಮಾಹಿತಿ ಇತ್ತೇ? ಹೀಗೆ ಹತ್ತಾರು ಪ್ರಶ್ನೆಗಳನ್ನು ತನಿಖಾಧಿಕಾರಿಗಳು ಕೇಳಿದ್ದಾರೆ.
ಪವಿತ್ರಾ ಸಂಬಂಧ ಗೊತ್ತಿತ್ತು
ರೇಣುಕಾಸ್ವಾಮಿ ಯಾರೆಂಬುದು ಗೊತ್ತಿಲ್ಲ. ಆತನ ಕೊಲೆಯ ಬಗ್ಗೆಯೂ ಮಾಹಿತಿ ಇಲ್ಲ. ಶೂ ಹಾಗೂ ಬಟ್ಟೆಗಳನ್ನು ದರ್ಶನ್ ಸಹಾಯಕರು ತಂದು ಇಟ್ಟಿದ್ದಾರೆ. ಅದರಲ್ಲಿ ಯಾವುದು? ಏನು? ಎಂಬುದು ತಿಳಿದಿಲ್ಲ ಎಂದು ವಿಜಯಲಕ್ಷ್ಮೀ ತಿಳಿಸಿದ್ದಾರೆ. ಆದರೆ ಪವಿತ್ರಾ ಮತ್ತು ಪತಿ ದರ್ಶನ್ ನಡುವಿನ ಸಂಬಂಧದ ಬಗ್ಗೆ ಈ ಹಿಂದೆಯೇ ಗೊತ್ತಿತ್ತು. ಈ ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾರೆ ಎನ್ನುತ್ತ ಭಾವುಕರಾದರು ಎಂದು ಹೇಳಲಾಗಿದೆ.
ಮೊದಲು ಬಟ್ಟೆ
ಮಾತ್ರ ಸಿಕ್ಕಿತ್ತು
ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ಸಂದರ್ಭ ಧರಿಸಿದ್ದ ಬಟ್ಟೆಗಳನ್ನು ಜೂನ್ 16ರಂದು ಆರ್.ಆರ್. ನಗರದ ದರ್ಶನ್ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಶೂ ಪತ್ತೆಯಾಗಿರಲಿಲ್ಲ. ಶೂ ಮತ್ತು ಇತರ ಕೆಲವು ಬೆಲೆಬಾಳುವ ವಸ್ತುಗಳನ್ನು ವಿಜಯಲಕ್ಷ್ಮೀ ಅವರ ಮನೆಯಿಂದ ವಶಕ್ಕೆ ಪಡೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.