Manjeshwara: ವಸತಿಗೃಹದ ಶೌಚಾಲಯದಲ್ಲಿ ಹೆಲ್ತ್ ಇನ್‌ಸ್ಪೆಕ್ಟರ್ ಶವ ಪತ್ತೆ
Team Udayavani, Jun 19, 2024, 9:45 PM IST
ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಆರೋಗ್ಯ ಕೇಂದ್ರದ ಹೆಲ್ತ್ ಇನ್‌ಸ್ಪೆಕ್ಟರ್ ಪತ್ತನಂತಿಟ್ಟ ನಿವಾಸಿ ಮನೋಜ್ ಕೆ.ವಿ. (45) ಮನೆಯ ಶೌಚಾಲಯದಲ್ಲಿ ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಅನತಿ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿದ್ದ ಅವರು ಜೂ. 18ರಂದು ಆಸ್ಪತ್ರೆಗೆ ಬಾರದ ಕಾರಣ ಸಹೋದ್ಯೋಗಿಗಳು ಫೋನ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮನೆಗೆ ತೆರಳಿದಾಗ ಒಳಗಿನಿಂದ ಚಿಲಕ ಹಾಕಲಾಗಿತ್ತು. ಒಳಗಿನಿಂದ ದುರ್ನಾತ ಬೀರುತ್ತಿತ್ತು. ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ಶೌಚಾಲಯದಲ್ಲಿ ಮೃತದೇಹ ಪತ್ತೆಯಾಯಿತು. ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ಎರಡು ತಿಂಗಳ ಹಿಂದೆಯಷ್ಟೇ ಬದಿಯಡ್ಕದಿಂದ ಮಂಜೇಶ್ವರದ ಕುಟುಂಬ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.