TamilNadu: ಅಕ್ರಮ ಮದ್ಯ ಸೇವನೆ, ಮೃತರ ಸಂಖ್ಯೆ 34ಕ್ಕೆ ಏರಿಕೆ-ಸಿಐಡಿ ತನಿಖೆ
ದುರಂತದ ತನಿಖೆ ಸಿಐಡಿಗೆ ವಹಿಸಿದ ಸಿಎಂ ಸ್ಟಾಲಿನ್
Team Udayavani, Jun 20, 2024, 4:47 PM IST
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ (ಕಳ್ಳಭಟ್ಟಿ) ಸೇವಿಸಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತದ ಬಗ್ಗೆಯ ತನಿಖೆಯನ್ನು ಸಿಬಿ ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆದೇಶಿಸಿದ್ದಾರೆ.
ಮೆಥಾನಲ್ ಮಿಶ್ರಿತ ‘ಅರಕ್ʼ ಮದ್ಯ ಪ್ಯಾಕೆಟ್ ಸೇವಿಸಿ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಗಿದೆ. ಈ ಪ್ರಕರಣದ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಸಮಾಜ ಹಾಳುಗೆಡುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದುʼ ಎಂದು ಸಿಎಂ ಸ್ಟಾಲಿನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾಲ್ವರ ಬಂಧನ:
ಕಲ್ಲಕುರುಚಿ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿದ್ದು, ಇಂತಹ ದುರ್ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ, ಸಾವಿನ ಹಿಂದಿರುವ ಕಾರಣ ಅರಿಯಲು ಮದ್ರಾಸ್ ಹೈ ಕೋರ್ಟ್ ನಿವೃತ್ತ ನ್ಯಾ.ಬಿ.ಗೋಕುಲ್‌ದಾಸ್ ನೇತೃತ್ವದ ಏಕಸದಸ್ಯ ಆಯೋಗ ರಚಿಸಲು ಅಧಿಕಾರಿಗಳಿಗೆ ಸಿಎಂ ಸ್ಟಾಲಿನ್ ಸೂಚನೆ ನೀಡಿದ್ದಾರೆ.
ಪರಿಹಾರ ಘೋಷಣೆ:
ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 50 ಸಾವಿರ ಪರಿಹಾರವನ್ನು ತಮಿಳುನಾಡು ಸರ್ಕಾರ ಘೋಷಿಸಿದೆ.
ಸರ್ಕಾರದ ವಿರುದ್ಧ ಬಿಜೆಪಿ, ಎಐಎಡಿಎಂಕೆ ಟೀಕೆ
ಅಕ್ರಮ ಮದ್ಯದ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರೂ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಕೆ.ಪಳನಿಸ್ವಾಮಿ ಟೀಕಿಸಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮಾತನಾಡಿ, ಕಳೆದ ವರ್ಷ ಅಕ್ರಮ ಮದ್ಯ ಸೇವಿಸಿ 22 ಮಂದಿ ಮೃತಪಟ್ಟಿದ್ದರೂ ಇದರಿಂದ ಸರ್ಕಾರ ಪಾಠ ಕಲಿತಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.