CM ವಿರುದ್ಧ ಜನಾರ್ದನ ರೆಡ್ಡಿ ಆಕ್ಷೇಪಾರ್ಹ ಟೀಕೆ: ಕಾಂಗ್ರೆಸ್‌ ಬಣಗಳ ಪ್ರತಿಭಟನೆ

ಬಣಗಳ ಪ್ರತಿಭಟನೆಗೆ ಸಂಸದ, ಸಚಿವ ಹಾಗೂ ಡಿಸಿಸಿ ಅಧ್ಯಕ್ಷರು ಗೈರು...ಒಂದು ಬಣ ತಟಸ್ಥ!!

Team Udayavani, Jun 20, 2024, 6:09 PM IST

1-gg

ಗಂಗಾವತಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಳ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಶಬ್ದಗಳಿಂದ ಟೀಕಿಸಿದ್ದನ್ನು ಖಂಡಿಸಿ ಗಂಗಾವತಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಕರೆ ನೀಡಿದ್ದ ಪ್ರತಿಭಟನೆಯು ವಿಚಿತ್ರ ಸ್ವರೂಪದಿಂದ ಕೂಡಿತ್ತು. ಹಲವು ವರ್ಷಗಳಿಂದ ಗಂಗಾವತಿಯಲ್ಲಿ ಕಾಂಗ್ರೆಸ್ ಹಲವು ಬಣಗಳನ್ನು ಹೊಂದಿದ್ದು ಗುರುವಾರದ ಪ್ರತಿಭಟನೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ಗೆ ಮುಜುಗರವಾಗುವಂತಹ ವಾತಾವರಣ ಸೃಷ್ಠಿಯಾಗಿತ್ತು.

ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಒಂದು ಕಡೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಶಾಮೀದ್ ಮನಿಯಾರ್ ಬಣ ಮತ್ತು ಮತ್ತೊಂದು ಕಡೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯ ಆಪ್ತರ ಬಣ ಪ್ರತೇಕ ಪ್ರತೇಕವಾಗಿ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿಕೆಯನ್ನು ಖಂಡಿಸಲಾಯಿತು. ಈ ಸಂದರ್ಭದಲ್ಲಿ ಬಸ್ ನಿಲ್ದಾಣ ಹಾಗೂ ರಸ್ತೆಯುದ್ದಕ್ಕೂ ನಿಂತಿದ್ದ ಜನರು ಕಾಂಗ್ರೆಸ್ ಪಕ್ಷದ ಬಣಗಳ ಪ್ರತೇಕ ಪ್ರತಿಭಟನೆ ಕಂಡು ಮನೋರಂಜನೆ ಪಡೆಯುವಂತಾಗಿತ್ತು.

ಶಾಮೀದ್ ಮನಿಯಾರ್ ಬಣದ ಕಾರ್ಯಕರ್ತರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮೀದ್ ಮನಿಯಾರ್ ಮಾತನಾಡಿ, ಶಾಸಕರಾಗಿರುವ ಜನಾರ್ದನ ರೆಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಮಾನ ಮಾಡಿದ್ದಾರೆ. ಗೌರವಯುತವಾದ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳಿಗೆ ಈ ರೀತಿಯಾಗಿ ಹೇಳಿಕೆ ನೀಡುವ ಮೂಲಕ ಅಪಮಾನ ಮಾಡಿರುವುದು ಖಂಡನೀಯ. ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರಕ್ಕೆ ಬಂದ 1 ವರ್ಷದ ಅವಧಿಯಲ್ಲಿಯೇ ಜನಪರ ಯೋಜನೆಗಳಾಗಿರುವ 5 ಯೋಜನೆಗಳನ್ನು ಜಾರಿ ಮಾಡಿ, ಜನರ ವಿಶ್ವಾಸವನ್ನು ಪಡೆದುಕೊಂಡಿದ್ದಾರೆ.

ಜನರಿಂದ ಆಯ್ಕೆಯಾಗಿರುವ ಮುಖ್ಯಮಂತ್ರಿಗಳಿಗೆ ತಳಮಟ್ಟದಲ್ಲಿ ಹೇಳಿಕೆ ನೀಡುವುದು ತಪ್ಪು, ಕೂಡಲೇ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಮಾನಗಳಲ್ಲಿ ರಾಜ್ಯದ ಎಲ್ಲಾ ಭಾಗಗಳಲ್ಲಿ ಹೋರಾಟಗಳನ್ನು ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶರಣೇಗೌಡ, ಅರಸಿನಕೇರಿ ಹನುಮಂತಪ್ಪ, ಮಲ್ಲೇಶ ದೇವರ ಮನಿ, ಯಮನೂರ ನೀರತಡಿ,ಅಡ್ಡಿಶಾಮಣ್ಣ, ಬಿ.ರಾಮಣ್ಣ, ಫಕೀರಮ್ಮ,ಅಸೀಫ್,ಪಾಮಣ್ಣ,ಸೋಮನಾಥ ಪಟ್ಟಣಶೆಟ್ಟಿ,ಯು.ಲಕ್ಷ್ಮಣ,ಎಸ್.ಟಿ.ಈರಪ್ಪ ಸೇರಿ ಅನೇಕರಿದ್ದರು.

ಅನ್ಸಾರಿ ಆಪ್ತರ ಬಣದ ಪ್ರತಿಭಟನೆ

ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಬೆಂಬಲಿಗರು ಶಾಸಕ ಗಾಲಿ ಜನಾರ್ದನರೆಡ್ಡಿ ಸಿಎಂ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿರುವುದು ಖಂಡನೀಯ ಕೂಡಲೇ ಕ್ಷಮೆ ಕೋರುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ವಿಠಲಾಪೂರ ಯಮನಪ್ಪ, ಸಣ್ಣಕ್ಕಿ ನೀಲಪ್ಪ, ರಾಚಪ್ಪ ಗುಂಜಳ್ಳಿ, ಮಾರೇಶ,ಹಾಜಿ,ಯಮನಪ್ಪ ದಳಪತಿ,ಆನಂದ,ರಾಜಮ್ಮ, ಸನಕ್ ಎಫ್. ರಾಘವೇಂದ್ರ, ಜುಬೇರ್, ನ್ಯಾಯವಾದಿ ಹುಸೇನಪ್ಪ ಹಂಚಿನಾಳ, ಮಲ್ಲಿಕಾರ್ಜುನ ತಟ್ಟಿ, ಬಾಬಣ್ಣ, ವೆಂಕಟೇಶ್ ಬಾಬು, ಶೇಖನಬಿ ಸಾಬ್ ಇದ್ದರು.

ಮತ್ತೊಂದು ಬಣ ಗೈರು
ಶಾಸಕ ರೆಡ್ಡಿ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿರುವ ಶಾಮೀದ್ ಮನಿಯಾರ್ ಜತೆಗೆ ಯಾರು ತೆರಳದಂತೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೊಬೈಲ್ ಸಂದೇಶ ಕಳಿಸಿದ್ದರಿಂದ ಮನಿಯಾರ್ ಹಾಗೂ ಅನ್ಸಾರಿ ಬಣಗಳ ಕಾರ್ಯಕರ್ತರು ಪ್ರತೇಕವಾಗಿ ಪ್ರತಿಭಟನೆ ನಡೆಸಿ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದ ಪ್ರಸಂಗ ಜರುಗಿತು.

ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಲಲಿತಾರಾಣಿ ಶ್ರೀರಂಗದೇವರಾಯಲು ಅವರ ಬಣ ಪ್ರತಿಭಟನೆಯಿಂದ ದೂರವಿದ್ದು ತಟಸ್ಥ ನಿಲುವು ಪ್ರದರ್ಶಿಸಿತು. ಈ ಮಧ್ಯೆ ಗಂಗಾವತಿಗೆ ಆಗಮಿಸಿದ್ದ ಸಂಸದ ಕೆ.ರಾಜಶೇಖರ ಹಿಟ್ನಾಳ, ಡಿಸಿಸಿ ಅಧ್ಯಕ್ಷ ಅಮರೇಗೌಡ ಭಯ್ಯಾಪೂರ ಸೇರಿ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಿರುವುದು ಕಂಡು ಬಂತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.