Mangaluru ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ
Team Udayavani, Jun 20, 2024, 6:37 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಜೂ.18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇ ಮೇಲ್ ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲವೇ ಕ್ಷಣ ಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಲಾಗಿತ್ತು.
ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜಪೆ ಠಾಣೆಗೆ ದೂರು ನೀಡಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕ ಇಲ್ಲ ಎಂದು ಭದ್ರತಾ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ದೇಶದ ಇತರ 41 ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇಮೇಲ್ ಬಂದಿವೆ ಎಂದು ತಿಳಿದು ಬಂದಿದೆ. ವಿಮಾನ ನಿಲ್ದಾಣಕ್ಕೆ ಏಪ್ರಿಲ್ 29 ರಂದು ಮತ್ತು 2023 ರ ಡಿ.26 ರಂದೂ ಬಾಂಬ್ ಬೆದರಿಕೆ ಇ ಮೇಲ್ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.