Sambhavami Yuge Yuge: ಹಳ್ಳಿಯ ಸುತ್ತ ಸಂಭವಾಮಿ…
Team Udayavani, Jun 21, 2024, 2:39 PM IST
ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಸಂಸ್ಥೆಯಡಿ ಪ್ರತಿಭಾ ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಚೇತನ್ ಅವರಿಗೆ ಇದು ಮೊದಲ ಚಿತ್ರ.
ಇದೊಂದು ಗ್ರಾಮೀಣ ಸೊಗಡಿನ ಕಮರ್ಷಿಯಲ್ ಥ್ರಿಲ್ಲರ್ ಚಿತ್ರವಾಗಿದ್ದು, ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಈ ಹಿಂದೆ “1975′ ಎಂಬ ಚಿತ್ರದಲ್ಲಿ ನಟಿಸಿದ್ದ ಜಯ್ ಶೆಟ್ಟಿ, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಬಿಜಾಪುರ ಮೂಲದ ನಿಶಾ ರಜಪೂತ್ ನಾಯಕಿಯಾಗಿ ಅಭಿನಯಿಸಿದ್ದಾರೆ.
ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಎಂಬ ವಿಷಯಗಳು “ಸಂಭವಾಮಿ ಯುಗೇ ಯುಗೇ’ ಚಿತ್ರದ ಕಥಾವಸ್ತು. ಯುವಕರು ಹಳ್ಳಿಯಲ್ಲೇ ನೆಲೆಸಬೇಕು ಮತ್ತು ಹಾಗೆ ನೆಲೆಸಬೇಕು ಎಂದರೆ ಹಳ್ಳಿಯಲ್ಲಿ ಒಂದಿಷ್ಟು ಕೆಲಸ ಆಗಬೇಕು ಎಂದು ನಾಯಕ ಮುಂದಾಗುತ್ತಾನೆ. ಈ ನಿಟ್ಟಿನಲ್ಲಿ ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾನೆ ಎನ್ನುವುದು ಚಿತ್ರದ ಕಥೆ. ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳು ಈ ಚಿತ್ರದಲ್ಲಿವೆ ಎನ್ನುತ್ತಾರೆ ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ.
“ಸಂಭವಾಮಿ ಯುಗೇಯಗೇ’ ಚಿತ್ರದಲ್ಲಿ ಜಯ್ ಶೆಟ್ಟಿ ಮತ್ತು ನಿಶಾ ರಜಪೂತ್ ಜೊತೆಗೆ ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರ ಗೌಡ, ಅಭಯ್ ಪುನೀತ್, ಬಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪೂರಣ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ.
ಪ್ರಾಂಕ್ರಿನ್ ರಾಖೀ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ನರಸಿಂಹ ಅವರ ಸಾಹಸ ನಿರ್ದೇಶನ, ಗೀತಾ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.