Yoga Day : ನಾಲ್ಯಪದವು ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನ ಆಚರಣೆ
Team Udayavani, Jun 22, 2024, 11:00 AM IST
ಮಂಗಳೂರು: ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಶಕ್ತಿನಗರ ಹಾಗೂ ಗ್ಲೆನ್ಮಾರ್ಕ್ ಫಾರ್ಮಾ ಸಹಭಾಗಿತ್ವದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಪದವು 21 ವಾರ್ಡಿನ ಕಾರ್ಪೊರೇಟರ್ ವನಿತಾ ಪ್ರಸಾದ್ ರವರು ಉದ್ಘಾಟಿಸಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯ ಬಗ್ಗೆ ಮಾತನಾಡಿದರು. ವಿದ್ಯಾ ದೀವಿಗೆ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ದೇವಾನಂದ ರವರು ಯೋಗದ ಮಹತ್ವ ದ ಬಗ್ಗೆ ಮಾತನಾಡಿದರು. ವಿದ್ಯಾ ದೀವಿಗೆ ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿ ರವೀಂದ್ರ ರೈರವರು ಯೋಗಾಸನ ಹಾಗೂ ಭಾರತೀಯ ಸಂಸ್ಕೃತಿಯ ಮಹತ್ವದ ಬಗ್ಗೆ ಹಿತ ನುಡಿದರು. ಯೋಗ ಶಿಕ್ಷಕ ರಾಜೇಶ್ ರವರನ್ನು ಶಾಲೆ ಹಾಗೂ ಗ್ಲೆನ್ಮಾರ್ಕ್ ಫಾರ್ಮಾ ವತಿಯಿಂದ ಸನ್ಮಾನಿಸಲಾಯಿತು.
ಕಿಶೋರ್ ಜೆ ರವರು ಅಧ್ಯಕ್ಷೀಯ ನುಡಿಯನ್ನು ನುಡಿದರು. ವಿದ್ಯಾ ದೀವಿಗೆ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷ ಟೋನಿ ಪಿಂಟೋ, ಗ್ಲೆನ್ಮಾರ್ಕ್ ಫಾರ್ಮಾದ ವ್ಯವಸ್ಥಾಪಕ ರವಿರಾಜ್, ಸಹಾಯಕ ಅವಿನಾಶ್ ಎಸ್‌ಡಿಎಂಸಿ ಸದಸ್ಯರಾದ ಪ್ರಮೀಳಾ ಹಾಗೂ ಆರತಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ನಂತರ ಯೋಗ ಶಿಕ್ಷಕ ರಾಜೇಶ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಪ್ರಾರ್ಥನೆ, ಪ್ರಾಣಾಯಾಮದೊಂದಿಗೆ ಆರಂಭವಾಯಿತು. ಸೂರ್ಯನಮಸ್ಕಾರ, ತಾಡಾಸನ, ಉತ್ಕಟಾಸನ, ಪಾದಹಸ್ತಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಮಕರಾಸನ, ಶಲಭಾಸನ, ಭುಜಂಗಾಸನ, ಶವಾಸನಗಳನ್ನು ಮಾಡಿಸಲಾಯಿತು.
ಶಾಲೆಯ ಪ್ರಭಾರಿ ಮುಖ್ಯೋಪಾಧ್ಯ ಗೋಪಾಲ್ ಟಿ ಸ್ವಾಗತಿಸಿದರು. ಶಿಕ್ಷಕ ಗಜಾನನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರಾದ ವಿಲಾಸಿನಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.