Suburban rail: ಉಪನಗರ ರೈಲು ಮಾರ್ಗಕ್ಕೆ 2800 ಕೋಟಿ ವಿದೇಶಿ ಸಾಲ
Team Udayavani, Jun 22, 2024, 3:28 PM IST
ಬೆಂಗಳೂರು: ನಗರದ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಉಪನಗರ ರೈಲು ಮಾರ್ಗಕ್ಕೆ ಯೂರೋಪಿಯನ್ ಇನ್‌ವೆಸ್ಟ್ ಮೆಂಟ್ ಬ್ಯಾಂಕ್ ಸುಮಾರು 2,800 ಕೋಟಿ ರೂ. ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದು, ಈ ಸಂಬಂಧ ದೆಹಲಿಯಲ್ಲಿ ಕೇಂದ್ರದ ಆರ್ಥಿಕ ವ್ಯವಹಾರಗಳ ಇಲಾಖೆಯು ಗುರುವಾರ ಬ್ಯಾಂಕ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡಿತು.
ಒಡಂಬಡಿಕೆಯಂತೆ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆ-ರೈಡ್) ಕೈಗೆತ್ತಿಕೊಂಡಿರುವ ಬೆಂಗ ಳೂರು ಉಪನಗರ ರೈಲು ಯೋಜನೆಗೆ ಯೂರೋಪಿಯನ್ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್ (ಇಐಎ) 300 ಮಿಲಿಯನ್ ಯೂರೋ (2,789 ಕೋಟಿ ರೂ.) ದೀರ್ಘಾವಧಿ ಸಾಲ ನೀಡಲಿದೆ. ಇದನ್ನು ಉದ್ದೇಶಿತ ಯೋಜನೆಯ ಕಾರಿಡಾರ್-1, ಡಿಪೋ-2 ಹಳಿ, ಟ್ರ್ಯಾಕ್ಷನ್ ಮತ್ತಿತರ ಉದ್ದೇಶಗಳಿಗೆ ವಿನಿಯೋಗಿಸಲು ಅವಕಾಶ ಕಲ್ಪಿಸಿದೆ.
41.4 ಕಿ.ಮೀ. ಉದ್ದದ ಕಾರಿಡಾರ್-1 ಮಾರ್ಗವು ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೇವನಹಳ್ಳಿ ನಡುವೆ ಸಂಪರ್ಕ ಕಲ್ಪಿಸಲಿದೆ. 2026-27ರ ಅಂತ್ಯಕ್ಕೆ ಈ ಮಾರ್ಗ ಪೂರ್ಣಗೊಳಿಸುವ ಗುರಿಯನ್ನು ಕೆ-ರೈಡ್ ಹೊಂದಿದೆ. ಈ ಸಾಲದ ನೆರವಿನಿಂದ ಯೋಜನೆ ಪ್ರಗತಿ ಮತ್ತಷ್ಟು ಚುರುಕುಗೊಳ್ಳಲಿದೆ. ಇದೇ ವಿಮಾನ ನಿಲ್ದಾಣಕ್ಕೆ “ನಮ್ಮ ಮೆಟ್ರೋ’ ಕೂಡ ಸಂಪರ್ಕ ಕಲ್ಪಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 148 ಕಿ.ಮೀ. ಉದ್ದದ 4 ಕಾರಿಡಾರ್ ಗಳು ಉಪನಗರ ರೈಲು ಯೋಜನೆ ಅಡಿ ನಿರ್ಮಿಸಲಾಗುತ್ತಿದ್ದು, 15,767 ಕೋಟಿ ರೂ. ಯೋಜನಾ ವೆಚ್ಚ ಅಂದಾಜಿಸಲಾಗಿದೆ. ಈ ಪೈಕಿ 7,438 ಕೋಟಿ (800 ಮಿಲಿಯನ್ ಯೂರೋ) ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಲು ಕೆ-ರೈಡ್‌ಗೆ ಅವಕಾಶ ಕಲ್ಪಿಸಲಾಗಿದೆ.
ಈ ಮಧ್ಯೆ ಗುರುವಾರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಮೂಲ ಸೌಕರ್ಯ ಸಚಿವ ಎಂ.ಬಿ. ಪಾಟೀಲ, ಜರ್ಮನಿಯ ಕೆಎಫ್ಡಬ್ಲ್ಯು ಡೆವಲಪ್‌ಮೆಂಟ್ ಬ್ಯಾಂಕ್ ಮತ್ತು ಯೂರೋ ಪಿಯನ್ ಇನ್‌ವೆಸ್ಟ್‌ಮೆಂಟ್ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಯೋಜನೆ ಪ್ರಯೋಜನಗಳ ಕುರಿತು ವಿವರಿಸಿದರು. ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಕೂಡ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.