ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌


Team Udayavani, Jun 22, 2024, 5:09 PM IST

ಗದಗ: ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ- ಸಲೀಂ ಅಹ್ಮದ್‌

ಉದಯವಾಣಿ ಸಮಾಚಾರ
ಗದಗ: ರಾಜ್ಯ ಸರ್ಕಾರ ಡೀಸೆಲ್‌ ಹಾಗೂ ಪೆಟ್ರೋಲ್‌ ಬೆಲೆಯನ್ನು ಕೇವಲ 3 ರೂ. ಹೆಚ್ಚಿಸಿದ್ದಕ್ಕೆ ಬೀದಿಗಿಳಿದು ಹೋರಾಟ
ಮಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರು, ಮನಮೋಹನಸಿಂಗ್‌ ಸರ್ಕಾರ ಇದ್ದಾಗ 65 ರೂ. ಇದ್ದ ಪೆಟ್ರೋಲ್‌ ದರ 100 ರೂ., 450 ರೂ. ಇದ್ದ ಅಡುಗೆ ಸಿಲಿಂಡರ್‌ ಬೆಲೆ 1,000 ರೂಪಾಯಿ ದಾಟಿದಾಗ ಇವರ ಧ್ವನಿ, ಹೋರಾಟ, ಬಡವರ ಬಗೆಗಿನ ಕಾಳಜಿ ಎಲ್ಲಿಗೆ ಹೋಗಿತ್ತು ಎಂದು ವಿಪ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಪ್ರಶ್ನಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಸ್ಥಾನ ಗೆಲ್ಲಲಾಗಲಿಲ್ಲ. ಆದರೆ 1ರಿಂದ 9 ಸ್ಥಾನ ಗೆದ್ದಿದ್ದೇವೆ. ಕಳೆದ ಬಾರಿಗಿಂತಲೂ ಪಕ್ಷದ ಮತಪ್ರಮಾಣ ಹೆಚ್ಚಿದೆ. ಇದರ ಮಧ್ಯೆ
ಹಾವೇರಿ, ಚಿತ್ರದುರ್ಗ, ಬೆಂಗಳೂರು ಕೇಂದ್ರ ಸೇರಿ ಕೆಲವು ಕ್ಷೇತ್ರಗಳಲ್ಲಿ ಕಡಿಮೆ ಅಂತರದಿಂದ ಸೋತಿದ್ದೇವೆ. ಧಾರವಾಡದಲ್ಲಂತೂ ಜೋಶಿಯವರು ಗೆದ್ದು ಸೋತಿದ್ದರೆ ಕಾಂಗ್ರೆಸ್‌ ಅಭ್ಯರ್ಥಿ ಅಸೂಟಿ ಅವರು ಸೋತು ಗೆದ್ದಿದ್ದಾರೆ ಎಂದರು.

ಉಪಚುನಾವಣೆಯಲ್ಲಿ ಕೈ ಗೆಲ್ಲುವ ವಿಶ್ವಾಸ:
ಮುಂಬರುವ ಚನ್ನಪಟ್ಟಣ, ಬಳ್ಳಾರಿ ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತರ ಪಕ್ಷದ
ಸಂಘಟನೆ, ಬೂತ್‌ ಕಮಿಟಿ ಕುರಿತು ಚರ್ಚೆ ನಡೆಯುತ್ತಿದೆ. ಇದಕ್ಕಾಗಿ ಸಮಿತಿ ಕೂಡ ರಚನೆಯಾಗಿದೆ. ಚುನಾವಣೆಯಲ್ಲಿ ಅಭ್ಯರ್ಥಿ
ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಮುಖಂಡರಾದ ಎಸ್‌.ಡಿ. ಮಕಾಂದಾರ, ಕೆ.ಎಂ. ಸೈಯ್ಯದ, ಹುಮಾಯೂನ್‌ ಮಾಗಡಿ ಸೇರಿ ಹಲವರಿದ್ದರು.

ಬಿಜೆಪಿಗೆ ಜನರ ತಕ್ಕ ಪಾಠ
ದೇಶದಲ್ಲಿ ಹತ್ತು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿಗೆ 18 ನೇ ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ಬಿಜೆಪಿಗೆ ಕೇವಲ 240 ಸ್ಥಾನಕ್ಕೆ ಇಳಿಸುವ ಮೂಲಕ ದುರಹಂಕಾರಿ ಸರ್ಕಾರಕ್ಕೆ ಸಂದೇಶ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಕ್ಕಪಾಠ ಕಲಿಸಿದ್ದಾರೆ. ಜತೆಗೆ ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ ಎನ್ನುತ್ತಿದ್ದವರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂಬುದನ್ನು ಇದು ತೋರಿಸುತ್ತಿದೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ಮಾಡಿದ್ದ ಅವರಿಗೆ ಜನರು ತಕ್ಕಪಾಠ ಕಲಿಸುವ ಮೂಲಕ ಸಂದೇಶ ನೀಡಿದ್ದಾರೆ ಎಂದು ಸಲೀಂ ಅಹ್ಮದ್‌ ಹೇಳಿದರು.

ರಾಜ್ಯದ ಬಿಜೆಪಿ ನಾಯಕರು, ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತ ಹಗಲುಗನಸು ಕಾಣುತ್ತಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಅ ಧಿಕಾರದ ಚುಕ್ಕಾಣಿ ಹಿಡಿದಿರುವ ಎನ್‌ಡಿಎ ಸರ್ಕಾರ ಕಿಚಡಿ ಸರ್ಕಾರವಾಗಿದ್ದು, ಇದಕ್ಕೆ ಆಯುಷ್ಯ ಬಹಳ ಕಡಿಮೆ. ಅದು ಹೆಚ್ಚುದಿನ ಉಳಿಯುವುದಿಲ್ಲ. ಹೀಗಾಗಿ ರಾಜ್ಯದ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರ
ಉಳಿಸಿಕೊಳ್ಳುವತ್ತ ಶ್ರಮಿಸಲಿ.
*ಸಲೀಂ ಅಹ್ಮದ್‌, ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ

7-gadag

Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag

ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.