KIOCL ಗೆ ದೇವದಾರಿ ಗಣಿಗಾರಿಕೆ ಭೂಮಿ ಹಸ್ತಾಂತರಿಸದಂತೆ ಸಚಿವ ಖಂಡ್ರೆ ಪತ್ರ
Team Udayavani, Jun 22, 2024, 10:34 PM IST
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕು ಸ್ವಾಮಿಮಲೈ ಬ್ಲಾಕ್‌ನ ದೇವದಾರಿ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ಬೆಂಗಳೂರಿನ ಮೆ. ಕೆಐಓಸಿಎಲ್ ಸಂಸ್ಥೆಗೆ ಗುತ್ತಿಗೆ ಪತ್ರ ಮಾಡಿಕೊಳ್ಳದಂತೆ, ಅರಣ್ಯ ಭೂಮಿಯನ್ನು ಹಸ್ತಾಂತರಿಸದಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಸಂಬಂಧಿಸಿದವರಿಗೆ ಸೂಚಿಸುವಂತೆ ನಿರ್ದೇಶಿಸಿದ್ದಾರೆ.
ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಮಲೈ ಬ್ಲಾಕ್‌ನ ದೇವದಾರಿ ಹಿಲ್ ಪ್ರದೇಶದಲ್ಲಿ 401.5761 ಹೆಕ್ಟೇರ್ ಅರಣ್ಯ ಭೂಮಿಯಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗಾಗಿ ಅರಣ್ಯ ತಿರುವಳಿ ಪಡೆದಿದ್ದು, ಅರಣ್ಯ ಇಲಾಖೆ ವತಿಯಿಂದ `ಅರಣ್ಯ ತಿರುವಳಿ ಗುತ್ತಿಗೆ ಪತ್ರ’ ಸಹಿಯೂ ಸೇರಿದಂತೆ ಜಮೀನು ಹಸ್ತಾಂತರವೊಂದು ಬಾಕಿ ಇದೆ.
ಆದರೆ, ಕೆಐಒಸಿಎಲ್ ಸಂಸ್ಥೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಣಿಗಾರಿಕೆಯ ಲೋಪದೋಶ/ಅರಣ್ಯ ಕಾಯ್ದೆ ಉಲ್ಲಂಘನೆಗಳಿಗಾಗಿ ಸಿಇಸಿಯು ನೀಡಿರುವ ನಿರ್ದೇಶನಗಳನ್ನು ನಿಗದಿತ ಕಾಲಮಿತಿಯಲ್ಲಿ ಸಂಪೂರ್ಣವಾಗಿ ಜಾರಿ ಮಾಡುವಲ್ಲಿ ವಿಫಲವಾಗಿರುವ ಕುರಿತು ದೂರುಗಳು ಕೇಳಿಬಂದಿವೆ. ಹಾಗಾಗಿ ಈ ಸಂಸ್ಥೆಗೆ ಸಂಡೂರಿನ ದೇವದಾರಿ ಪ್ರದೇಶದಲ್ಲಿ ಗಣಿಗಾರಿ ನಡೆಸಲು ನೀಡಲಾಗಿರುವ ಅರಣ್ಯ ತಿರುವಳಿಯನ್ನು ಅನುಷ್ಠಾನಗೊಳಿಸದಂತೆ, ಅರಣ್ಯ ತಿರುವಳಿ ಗುತ್ತಿಗೆ ಪತ್ರ ಮಾಡಿಕೊಳ್ಳದಂತೆ, ಅರಣ್ಯ ಭೂಮಿಯನ್ನು ಹಸ್ತಾಂತರಿಸದಂತೆ ಸಂಬಂಧಿಸಿದವರಿಗೆ ಸೂಚಿಸುವಂತೆ ಸಚಿವ ಈಶ್ವರ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.