Delhi; ನೀರಿಗೆ ಆಗ್ರಹಿಸುತ್ತಿದ್ದವರ ಮೇಲೆ ಜಲಫಿರಂಗಿ ಬಳಿಸಿದ ಪೊಲೀಸ್
Team Udayavani, Jun 23, 2024, 1:02 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ನೀರಿಗಾಗಿ ಸರಕಾರದ ವಿರುದ್ಧ ಜನ ಪ್ರತಿಭಟನೆ ನಡೆಸುತ್ತಿದ್ದು ಇದನ್ನು ಹತ್ತಿಕ್ಕಲು ಪೊಲೀಸರು ನೀರನ್ನೇ ಬಳಸಿರುವುದು ವಿಪರ್ಯಾಸ. ಓಖ್ಲದಲ್ಲಿರುವ ಜಲಮಂಡಳಿ ಎದುರು ಬಿಜೆಪಿ ನಾಯಕ ರಮೇಶ್ ಬಿಧುರಿ ನೇತೃ ತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಇವರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಗಳನ್ನು ಬಳಸಿದ್ದಾರೆ. ಈ ಸಂಬಂಧ ಫೋಟೋ, ವೀಡಿಯೋಗಳು ವೈರಲ್ ಆಗಿದ್ದು, ನೆಟ್ಟಿಗರು ಈ ಬಗ್ಗೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದನ್ನು ಆಮ್ ಆದ್ಮಿ ರಾಜಕೀಯ ನಾಟಕ ಎಂದು ಟೀಕಿಸಿದೆ. ಈ ಮಧ್ಯೆ, ದಿಲ್ಲಿ ಸಚಿವೆ ಆತಿಶಿ ನಡೆಸುತ್ತಿರುವ ಪ್ರತಿಭಟನೆಯನ್ನು ಹಳಿ ತಪ್ಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದೂ ಆಪ್ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.