Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!
Team Udayavani, Jun 24, 2024, 1:30 AM IST
ಬಂಟ್ವಾಳ: ಬಿ.ಸಿ.ರೋಡ್-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಭಾಗವಾಗಿ ಕಲ್ಲಡ್ಕದಲ್ಲಿ ನಿರ್ಮಾಣಗೊಳ್ಳುವ ಫ್ಲೈಓವರ್ ಕಾಮಗಾರಿಯಿಂದ ಹೆದ್ದಾರಿ ಅವ್ಯವಸ್ಥೆ ಮುಂದುವರಿದಿದ್ದು, ರವಿವಾರ ಮಧ್ಯಾಹ್ನದ ಬಳಿಕ ಸುರಿದ ಧಾರಾಕಾರ ಮಳೆಯಿಂದಾಗಿ ಕಲ್ಲಡ್ಕದ ಸರ್ವೀಸ್ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.
ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ನಿರಂತರ ಸಮಸ್ಯೆಯಾಗುತ್ತಿದ್ದು, ರವಿವಾರ ಕೊಂಚ ಹೆಚ್ಚೇ ಮಳೆ ಸುರಿದ ಪರಿಣಾಮ ವಾಹನಗಳು ನೀರಿನಲ್ಲೇ ಸಂಚರಿಸುವಂತಾಗಿತ್ತು. ಸಣ್ಣ ವಾಹನಗಳ ಚಕ್ರಗಳು ಪೂರ್ತಿ ಮುಳುಗುವಷ್ಟರ ಮಟ್ಟಿಗೆ ರಸ್ತೆಯಲ್ಲಿ ನೀರು ಸಂಗ್ರಹವಾಗಿತ್ತು.
ಹೆದ್ದಾರಿ ಕಾಮಗಾರಿ ಪ್ರಾರಂಭವಾದಂದಿನಿಂಲೂ ಸಂಚಾರ ನಿರಂತರ ತೊಂದರೆಯಾಗುತ್ತಿದೆ. ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು, ನೂತನ ಸಂಸದರು ಜನರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಿರ್ವಹಿಸುವಂತೆ ಪದೇಪದೆ ಸೂಚನೆ ನೀಡಿದ್ದು, ಸ್ವತಃ ದ.ಕ.ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸಮರ್ಪಕ ಕಾಮಗಾರಿ ನಿರ್ವಹಣೆಗೆ ನಿರ್ದೇಶನ ನೀಡಿದರೂ ಸಮಸ್ಯೆ ಯಥಾಸ್ಥಿತಿಯಲ್ಲೇ ಇದೆ ಎನ್ನುವುದಕ್ಕೆ ರವಿವಾರದ ಕೃತಕ ನೆರೆ ಸಾಕ್ಷಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.