Modi 3.0: ಲೋಕಸಭೆ ಅಧಿವೇಶನ ಇಂದು ಆರಂಭ: ಏನೇನು ನಡೆಯಲಿದೆ?
ಯಾರಾಗಲಿದ್ದಾರೆ ಹೊಸ ಸ್ಪೀಕರ್ ?
Team Udayavani, Jun 24, 2024, 6:10 AM IST
ಹೊಸದಿಲ್ಲಿ: ನೂತನ ಲೋಕ ಸಭೆಯ ಮೊದಲ ಅಧಿವೇಶನ ಸೋಮ ವಾರ ಆರಂಭವಾಗಲಿದ್ದು, ಮೋದಿ 3.0 ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಮೊದಲ ಅಧಿವೇಶನ ಇದಾಗಲಿದೆ.
ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಆಯ್ಕೆಗೆ ಈಗಾಗಲೇ ವಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ಈ ವಿಷಯ ಅಧಿವೇಶನದಲ್ಲಿ ಸದ್ದು ಮಾಡುವ ಸಾಧ್ಯತೆಯಿದೆ. ಜತೆಗೆ ನೀಟ್-ನೆಟ್ ಅಕ್ರಮವನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರದ ವಿರುದ್ಧ ವಾಗ್ಬಾಣ ಹೂಡಲು ವಿಪಕ್ಷಗಳು ಸಜ್ಜಾಗಿದ್ದು, ಅಧಿವೇಶನದಲ್ಲಿ ಗದ್ದಲವೆಬ್ಬಿಸುವ ಸಾಧ್ಯತೆ ಇದೆ.
ಸೋಮವಾರ ಆರಂಭವಾಗಲಿರುವ ಅಧಿವೇಶನ ಜು. 3ರ ವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಜೂ. 27ರಿಂದ ಜು. 3ರ ವರೆಗೆ ನಡೆಯಲಿದೆ. ಮೊದಲ ದಿನ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಭತೃì ಹರಿ ಮಹತಾಬ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಒಟ್ಟು 543 ಲೋಕಸಭಾ ಸದಸ್ಯರ ಪೈಕಿ ಮೊದಲ ದಿನವಾಗಿರುವ ಸೋಮವಾರ 280 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೊದಲಿಗೆ ಪ್ರಧಾನಿ ಮೋದಿ ಲೋಕ ಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸ ಲಿದ್ದಾರೆ. ಅನಂತರ ಸಂಪುಟದ ಸದಸ್ಯರು, ಇತರ ಚುನಾಯಿತ ಸದಸ್ಯರು ಪ್ರಮಾಣ ಸ್ವೀಕರಿಸಲಿದ್ದಾರೆ. ಜೂ. 25ರಂದು ಮಿಕ್ಕುಳಿದ 264 ಮಂದಿ ಸದಸ್ಯರು ಪ್ರಮಾಣ ಸ್ವೀಕರಿಸಲಿದ್ದಾರೆ.
ಏನೇನು ನಡೆಯಲಿದೆ?
ಜೂ. 24, 25: ಹಂಗಾಮಿ ಸ್ಪೀಕರ್ ಪ್ರಮಾಣ, ಮೊದಲ ಹಂತದಲ್ಲಿ 264 ಮಂದಿಯ ಪ್ರಮಾಣ
ಜೂ. 26: ಉಳಿದ 264 ಮಂದಿಯ ಪ್ರಮಾಣ. ಸ್ಪೀಕರ್ ಚುನಾವಣೆ
ಜೂ. 27: ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಜೂ. 28: ರಾಷ್ಟ್ರಪತಿ ಭಾಷಣಕ್ಕೆ ಧನ್ಯವಾದ ಸಮರ್ಪಿಸುವ ಗೊತ್ತುವಳಿ ಮೇಲೆ ಚರ್ಚೆ ಆರಂಭ
ಜು. 2 ಅಥವಾ ಜು. 3: ಚರ್ಚೆಗೆ ಪ್ರಧಾನಿ ಉತ್ತರ
ಭರ್ತೃಹರಿ ಮಹತಾಬ್ 1998 ರಿಂದ ಕಟಕ್‌ನಿಂದ ನಿರಂತರವಾಗಿ ಗೆಲ್ಲುತ್ತಿದ್ದಾರೆ. ಹೀಗಾಗಿ ಹಂಗಾಮಿ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದೇವೆ. ಕಾಂಗ್ರೆಸ್‌ನ ಕೆ. ಸುರೇಶ್ 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದರು.
-ಕಿರಣ್ ರಿಜಿಜು, ಸಂಸದೀಯ ವ್ಯವಹಾರ ಸಚಿವ
ಯಾರಾಗಲಿದ್ದಾರೆ ಹೊಸ ಸ್ಪೀಕರ್ ?
ಲೋಕಸಭೆ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದೆ. ಎನ್‌ಡಿಎ ವತಿಯಿಂದ ಯಾರು ಸ್ಪೀಕರ್ ಆಗಲಿದ್ದಾರೆ ಎಂಬ ವಿಚಾರ ಈಗ ಕುತೂಹಲ ಕೆರಳಿಸಿದೆ. ಬಿಜೆಪಿ ಯಾರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುತ್ತದೆಯೊ ಅವರನ್ನು ನಾವು ಬೆಂಬಲಿಸುತ್ತೇವೆ ಎಂದು ಜೆಡಿಯು ಈಗಾಗಲೇ ಹೇಳಿದೆ. ಟಿಡಿಪಿ ಕೂಡ ಸ್ಪೀಕರ್ ಆಯ್ಕೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದೆ. ಸದ್ಯ ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ದಗ್ಗುಬಾಟಿ ಪುರಂದೇಶ್ವರಿ ಮತ್ತು ಟಿಡಿಪಿ ಯಿಂದ ಮೊದಲ ಬಾರಿಯ ಸಂಸದ ಜಿ.ಎಂ. ಹರೀಶ್ ಬಾಲಯೋಗಿ ಅವರ ಹೆಸರು
ಸ್ಪೀಕರ್ ಸ್ಥಾನಕ್ಕೆ ಕೇಳಿಬರುತ್ತಿವೆ. ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ತನ್ನ ಸದಸ್ಯನನ್ನು ಕಣಕ್ಕಿಳಿಸಿದರೆ ಐಎನ್‌ಡಿಐಎ ಒಕ್ಕೂಟದ ನಾಯಕರೆಲ್ಲ ಚರ್ಚಿಸಿ ಬೆಂಬಲ ಸೂಚಿಸುತ್ತೇವೆ ಎಂದು ಶಿವಸೇನೆ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಜೂ. 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.