ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ
Team Udayavani, Jun 25, 2024, 1:00 AM IST
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕನ್ನಡ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭ ಅವರು ಹಳದಿ ಮತ್ತು ಕೆಂಪು ಬಣ್ಣದ ಶಾಲು ಧರಿಸಿದ್ದರು.
ಕಸಾಪ ಮನವಿ
ಕನ್ನಡದ ಶಾಲು ಧರಿಸಿ, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವಂತೆ ಕೋಟ ಶ್ರೀನಿವಾಸ ಪೂಜಾರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಕೋರಿಕೆ ಸಲ್ಲಿಸಲಾಗಿತ್ತು. ಪರಿಷತ್ನ ಪದಾಧಿಕಾರಿಗಳು ಹೊದಿಸಿದ ಶಾಲು ಧರಿಸಿಯೇ ಪ್ರಮಾಣ ವಚನ ಸ್ವೀಕರಿಸಿದ್ದು, ಇದು ಕನ್ನಡಿಗರಿಗೆಲ್ಲರಿಗೂ ಖುಷಿಯ ವಿಚಾರ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.