KMF: ರಾಜ್ಯದಲ್ಲಿ ಹಾಲಿನ ದರ ಲೀಟರ್ಗೆ ಎರಡು ರೂಪಾಯಿ ಹೆಚ್ಚಳ…
ನಾಳೆಯಿಂದಲೇ ಪರಿಷ್ಕೃತ ದರ ಜಾರಿ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Team Udayavani, Jun 25, 2024, 12:14 PM IST
ಬೆಂಗಳೂರು: ಇತ್ತೀಚೆಗಷ್ಟೇ ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿ ರಾಜ್ಯದ ಜನರ ಮೇಲೆ ಬರೆ ಹಾಕಿದ್ದ ರಾಜ್ಯ ಸರ್ಕಾರ ಈಗ ಹಾಲಿನ ದರ ಹೆಚ್ಚಳಗೊಳಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ಉತ್ಪನ್ನವಾದ ನಂದಿನಿ ಹಾಲಿನ ದರ ಲೀಟರ್ಗೆ 2 ರೂಪಾಯಿ ಹೆಚ್ಚಿಸಿ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ, ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿ ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇದ್ದು ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಅರ್ಧ ಲೀಟರ್ ಹಾಲಿನ ದರದಲ್ಲೂ 2 ರೂ. ಹೆಚ್ಚಳವಾಗಲಿದೆ. ಸದ್ಯ ಅರ್ಧ ಲೀಟರ್ ಹಾಲಿನ ಪ್ಯಾಕೇಟ್ಗೆ 22 ರೂ. ಇದೆ. ಅರ್ಧ ಲೀಟರ್ ಹಾಲಿನಲ್ಲೂ ಹೆಚ್ಚುವರಿಯಾಗಿ 50 ಎಂಎಲ್ ಸೇರಿಸಲಾಗುವುದು ಈ ಪರಿಷ್ಕೃತ ದರವೂ ನಾಳೆಯಿಂದಲೇ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.
ಇತರೆ ರಾಜ್ಯಗಳಿಗೆ ಹೋಲಿಸಿದಲ್ಲಿ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ.
ಮೊಸರು, ಇತರೆ ಉತ್ಪನ್ನದ ಬೆಲೆ ಏರಿಕೆ ಇಲ್ಲ: ಈ ಪರಿಷ್ಕೃತ ದರಗಳು ಹಾಲಿಗೆ ಮಾತ್ರ ಅನ್ವಯವಾಗಲಿದೆ. ನಂದಿನಿಯ ಇತರೆ ಉತ್ಪನ್ನಗಳಾದ ಮೊಸರು, ಲಸ್ಸಿ, ಇತರೆ ಉತ್ಪನ್ನಗಳಲ್ಲಿ ಏರಿಕೆ ಇಲ್ಲವೆಂದು ಕೆಎಂಎಫ್ ಅಧ್ಯಕ್ಷ ಹೇಳಿದ್ದಾರೆ. ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.