B. Y. Vijayendra ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಸರ್ಕಾರ ಕ್ರಮ
Team Udayavani, Jun 25, 2024, 8:54 PM IST
ಬೆಂಗಳೂರು: ನಂದಿನಿ ಹಾಲಿನ ಮೇಲೆ ಹೆಚ್ಚುವರಿಯಾಗಿ 2 ರೂ. ಸಂಗ್ರಹಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇದು ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ
ಕಳ್ಳ ಸರ್ಕಾರ: ಶರವಣ
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಏಕಾಏಕಿ ಪೆಟ್ರೋಲ್-ಡೀಸೆಲ್, ತರಕಾರಿ ಬೆಲೆ ಏರಿಸಿ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಇದೀಗ ಹಾಲಿನ ದರ ಕೂಡ ಹೆಚ್ಚಿಸಿದೆ. ಕೊಟ್ಟು ಕಿತ್ತುಕೊಳ್ಳುವ ಈ ಸರ್ಕಾರ ಕೂಡಲೇ ತೊಲಗಬೇಕು ಎಂದು ಜೆಡಿಎಸ್ ಮುಖಂಡ ಶರವಣ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯದ ಆರ್ಥಿಕ ಸ್ಥಿತಿ ಕುಸಿದು ಬಿದ್ದಿದ್ದು, ಚಿಲ್ಲರೆ ಹಣವನ್ನು ಬಡವರ ಜೇಬಿನಿಂದ ಕದಿಯಲು ಹೊರಟ ಸಿದ್ದರಾಮಯ್ಯ ಸರ್ಕಾರ ಕಳ್ಳ ಸರ್ಕಾರ ಎನ್ನುವುದನ್ನು ವಿಧಿಯಿಲ್ಲದೆ ಹೇಳಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.