DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು


Team Udayavani, Jun 25, 2024, 11:38 PM IST

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

ಮಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಡಿ.ಕೆ. ಸುರೇಶ್‌ಗೆ ಆಸಕ್ತಿಯಿಲ್ಲ. ಜನರು ಸುರೇಶ್‌ಗೆ ವಿಶ್ರಾಂತಿ ತೆಗೆದುಕೊಳ್ಳಲು ಹೇಳಿದ್ದಾರೆ. ಆದರೆ ಅವರಿಗೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85,000 ಮತ ಕೊಟ್ಟಿದ್ದಾರೆ. ಅವರನ್ನು ಕೈ ಬಿಡಲು ಆಗದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಕುಕ್ಕೆ ಸುಬ್ರಹ್ಯಣ್ಯಕ್ಕೆ ಹೋಗಲು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ.ಕೆ.ಶಿ. ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಚನ್ನಪ ಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡ ವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಅವರು ಟಾಂಗ್‌ ನೀಡಿದರು.

ಚನ್ನಪಟ್ಟಣಕ್ಕೆ ಏನೂ ಮಾಡದ ಡಿಕೆಶಿಯವರಿಗೆ ಈಗ ಮಮತೆ ಬಂದಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂದು ಎಚ್‌.ಡಿ. ಕುಮಾರಸ್ವಾಮಿ ಯವರಿಗೇನು ಗೊತ್ತು? ನಾನು 1985ರಲ್ಲೇ ಅವರ ತಂದೆ ವಿರುದ್ಧ ಚುನಾವಣೆಗೆ ನಿಂತವನು. ಕುಮಾರ ಸ್ವಾಮಿ ಅವರು 1995ರ ಬಳಿಕ ಲೋಕಸಭಾ ಚುನಾವಣೆಗೆ ನಿಂತ ವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ ಎಂದು ಹೇಳಿದರು.

ನಂಬಿಕೆಯಂತೆ ಪ್ರಾರ್ಥನೆ
ಕ್ಷೇತ್ರಕ್ಕೆ ಭೇಟಿ ಬಗ್ಗೆ ಕೇಳಿದಾಗ ಶಿವಕುಮಾರ್‌ ಅವರು, “ನಾವು ಹಿಂದೂ ಧರ್ಮ ದವರು. ರಾಜ್ಯದಲ್ಲಿ ಎಲ್ಲ ಸಂಸ್ಕೃತಿ ಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವರು. ಬಹಳ ದಿನಗಳಿಂದ ಸುಬ್ರಹ್ಮಣ್ಯಕ್ಕೆ ಹೋಗಬೇಕೆಂಬ ಆಸೆಯಿತ್ತು. ಈಡೇರಿದೆ ಎಂದರು.

ಪಕ್ಷ ಉತ್ತರ ನೀಡಲಿದೆ
ಹೆಚ್ಚುವರಿ ಡಿಸಿಎಂ ಸ್ಥಾನಗಳ ಬೇಡಿಕೆ ಬಗ್ಗೆ ಉತ್ತರಿಸಿದ ಅವರು, ನೀವು ದಿನವೂ ಈ ಬಗ್ಗೆ ಸುದ್ದಿ ಮಾಡುತ್ತಿದ್ದೀರಿ. ಇದರಿಂದ ಖುಷಿ ಆಗುವವರಿಗೆ ಆಗಲಿ. ಖುಷಿ ಪಡುವವರಿಗೆ ಬೇಡ ಎಂದು ಹೇಳಲು ಆಗುವುದೇ? ಯಾರು ಏನು ಬೇಕಾದರೂ ಬೇಡಿಕೆ ಇಡಲಿ. ಪಕ್ಷವು ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತದೆ ಎಂದರು.

ಮೈನಿಂಗ್‌ ಬಗ್ಗೆ ಗೊತ್ತಿಲ್ಲ
“ನಮ್ಮ ಮೇಲಿನ ದ್ವೇಷದ ಕಾರಣಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಗೆ ರಾಜ್ಯ ಸರಕಾರ ಅನುಮತಿ ನೀಡುತ್ತಿಲ್ಲ’ ಎಂಬ ಕುಮಾರ ಸ್ವಾಮಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿ. ಅವರು “ಮೈನಿಂಗ್‌ ಬಗ್ಗೆ ಕುಮಾರಸ್ವಾಮಿ ಯವರಿಗೆ ತಿಳುವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ನನಗಂತೂ ಆ ಬಗ್ಗೆ ಏನೂ ಗೊತ್ತಿಲ್ಲ’ ಎಂದರು.

ಅರಣ್ಯ ಸಮಸ್ಯೆ: ಕಾನೂನು ತಿದ್ದುಪಡಿ
ಸುಬ್ರಹ್ಮಣ್ಯ: ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ತೊಂದರೆ ಕೊಡುವ, ಅವರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುವುದಿಲ್ಲ. ಹಾಗಾಗಿ ಅರಣ್ಯ ಸಮಸ್ಯೆ ಪರಿಹಾರಕ್ಕೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಮಂಗಳವಾರ ಅವರು ಪತ್ರಕರ್ತ ರೊಂದಿಗೆ ಮಾತನಾಡಿ, ಕೇಂದ್ರ ಮತ್ತು ನಮ್ಮ ಸರಕಾರ ಕೇವಲ ಪರಿಶಿಷ್ಟ ಪಂಗಡದವ‌ರಿಗೆ (ಎಸ್‌.ಟಿ.) ಒಂದು ಕಾನೂನು ಮಾಡಿದ್ದು ಅದರಲ್ಲಿ ಅವರಿಗೆ 25 ವರ್ಷದಿಂದ ಅರಣ್ಯದಲ್ಲಿ ಇರುವವರಿಗೆ ಜಮೀ ನು ಕೊಡಬಹುದೆಂಬ ಕಾನೂನು ಇದೆ. ಇದರಿಂದ ತಾರತಮ್ಯವಾಗಿದೆ ಎಂಬ ದೂರಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು ಬೇರೆ ಜನಾಂಗದ ರೈತರಿಗೂ ರಕ್ಷಣೆ ಕೊಡಲು ಕಾನೂನು ತಿದ್ದುಪಡಿ ಮಾಡಿ ದಿಲ್ಲಿಗೆ ಕಳುಹಿಸಲಾಗುವುದು. ಅಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಂದಿನಿ ಹಾಲಿನ ಬೆಲೆ ಹೆಚ್ಚಳ
ಹುಲ್ಲಿನ ಬೆಲೆ, ದಿನಸಿ ಬೆಲೆಗಳು ಜಾಸ್ತಿಯಾಗಿದ್ದು, ರೈತರಿಗೂ ತೊಂದ ರೆಯಾಗಿತ್ತು. ನೀರಿನ ಬೆಲೆಯೂ ಜಾಸ್ತಿಯಾಗಿದೆ. ರೈತರಿಗೆ ಸಿಗುವ ಹಾಲಿನ ಬೆಲೆ ಕಡಿಮೆ ಯಾಗಿತ್ತು, ರೈತರ ಒತ್ತಾಯದ ಮೇಲೆ ಹಾಲಿನ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಹಾಲಿನ ಬೆಲೆ ಏರಿಕೆ ಪ್ರಶ್ನೆಗೆ ಉತ್ತರಿಸಿದರು.

ಇನ್ನೊಮ್ಮೆ ಮಾತನಾಡೋಣ
ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಚರ್ಚೆಗೆ ಸಂಬಂಧಿಸಿದ ಪ್ರಶ್ನೆಗೆ, ಇನ್ನೊಮ್ಮೆ ಮಾತನಾಡೋಣ ಎಂದರು. 3-4 ಡಿಸಿಎಂ ಹುದ್ದೆ ಬೇಡಿಕೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ ಹಲವು ಬಾರಿ ಉತ್ತರಿಸಿದ್ದು ಈ ವಿಚಾರ ಇನ್ನೊಮ್ಮೆ ಮಾತನಾಡೋಣ ಎಂದರು.

ನಾನು ಕುಟುಂಬ ಸಮೇತ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಎಲ್ಲರ ಶಾಂತಿ ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಮಳೆ ಕಡಿಮೆ ಆಗಿದ್ದು ನೀರಿನ ಸಮಸ್ಯೆ ಆಗಿದೆ. ಮಳೆ ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು ಡಿಸಿಎಂ.

ಶಕ್ತಿ ಯೋಜನೆಯಡಿ ಪ್ರಯಾಣಿ ಕರಿಗೆ ಪ್ರಯೋಜನವಾಗಿದೆ ಎಂದ ಅವರು ಕುಕ್ಕೆಯಲ್ಲಿ ಬಸ್‌ ಡಿಪೋ ಬೇಡಿಕೆ ಬಗ್ಗೆ ಗಮನಕ್ಕೆ ಬಂದಿಲ್ಲ. ಜನರು ಕೇಳಲಿ ಎಂದು ಉತ್ತರಿಸಿದ ಘಟನೆಯೂ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ಸಂಬಂಧ ಪ್ರಸ್ತಾವನೆ ಸರಕಾರದ ಮುಂದಿದೆ. ಕಾರ್ಯಕರ್ತರ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಪಡೆದು, ಧಾರ್ಮಿಕವಾಗಿ ದೇವ ಸ್ಥಾನದ ಗೌರವ, ಘನತೆ ನೋಡಿ ಕೊಂಡು ಚರ್ಚಿಸಿ ಸರಕಾರಕ್ಕೆ ಅಂತಿಮ ನಿರ್ಧಾರ ತಿಳಿಸಲಾಗುವುದು ಎಂದರು.

ಕುಕ್ಕೆಗೆ ಸುಸಜ್ಜಿತ ಆಸ್ಪತ್ರೆಗೆ ಪ್ರಯತ್ನ
ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಅಸ್ಪತ್ರೆ ಸಂಬಂಧಿಸಿದಂತೆ ಜಿಲ್ಲಾ ಉಸ್ತು ವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಲ್ಲಿ ಚರ್ಚಿಸುತ್ತೇವೆ, ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇವೆ ಎಂದರು. ಬಿಜೆಪಿಯ ಪ್ರೀತಂ ಗೌಡ ಮೇಲೆ ವೀಡಿಯೋ ವೈರಲ್‌ ಸಂಬಂಧ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಉತ್ತರಿಸಿದರು.

ಟಾಪ್ ನ್ಯೂಸ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.