Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ
"ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ' - ಸಂವಾದ
Team Udayavani, Jun 25, 2024, 11:51 PM IST
ಮಂಗಳೂರು: ದೇಶದಲ್ಲಿ ಸಂವಿಧಾನವನ್ನು ಅತೀ ಹೆಚ್ಚು ಬಾರಿ ತಿದ್ದುಪಡಿ ಮಾಡಿದವರು ಕಾಂಗ್ರೆಸ್‌ವನರು. ಅದರಲ್ಲೂ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ರಾಜೀವ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ಒಟ್ಟು 58 ಬಾರಿ ತಿದ್ದುಪಡಿ ಮಾಡಲಾಗಿದೆ.
ಸಂವಿಧಾನದ ಮೂಲ ಚೌಕಟ್ಟನ್ನೇ ಹಾಳು ಮಾಡಿದ್ದು ಕಾಂಗ್ರೆಸ್. ಬಿಜೆಪಿಯ ಮೇಲೆ ಆರೋಪ ಹೊರಿಸುವ ಮೊದಲು ಕಾಂಗ್ರೆಸ್ಸಿಗರು ಈ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೇಳಿದರು.
“ತುರ್ತು ಪರಿಸ್ಥಿತಿ- ಸಂವಿಧಾನಕ್ಕೆ ಮಾಡಿದ ಅಪಚಾರ’ ಎಂಬ ವಿಚಾರದಲ್ಲಿ “ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು’ ಸಂಘಟನೆ ವತಿಯಿಂದ ನಗರದಲ್ಲಿ ಮಂಗಳವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಇಲ್ಲಿಯವರೆಗೆ 106 ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಒಟ್ಟು 75 ಬಾರಿ ತಿದ್ದುಪಡಿ ಮಾಡಲಾಗಿದೆ. ವಾಜಪೇಯಿ, ನರೇಂದ್ರ ಮೋದಿ ಸಹಿತ ಇತರರು ಪ್ರಧಾನಿಯಾಗಿದ್ದಾಗ ಕೇವಲ 31 ಬಾರಿ ಮಾತ್ರ ತಿದ್ದುಪಡಿಯಾಗಿದೆ ಎಂದರು.
ಸ್ವಾತಂತ್ರ್ಯ ಹೋರಾಟಕ್ಕೆ ಸಮ
ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನದ ರಕ್ಷಣೆಗಾಗಿ ಎರಡು ಮೂರು ತಲೆಮಾರು ಶ್ರಮಪಟ್ಟಿದೆ. ಇದು ಸ್ವಾತಂತ್ರ್ಯ ಹೋರಾಟಕ್ಕೆ ಸಮ. ಆದರೆ ಅವರಿಗೆ ಏನೂ ಪ್ರತಿಫಲ ಸಿಕ್ಕಿಲ್ಲ. ಕಾಂಗ್ರೆಸ್‌ಗೆ ಮತ್ತೆ ಅಧಿಕಾರವನ್ನು ಕೊಟ್ಟರೆ ದೇಶದಲ್ಲಿ ಏನೇನು ಆಗಬಹುದು ಎನ್ನುವುದನ್ನು ಮುಂದಿನ ತಲೆಮಾರಿಗೆ ತಿಳಿಸುವ, ಎಚ್ಚರಿಸುವ ಕೆಲಸ ನಾವು ಮಾಡಬೇಕು ಎಂದರು.
ದ.ಕ. ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಶಾಸಕ ವೇದವ್ಯಾಸ ಕಾಮತ್, ವಿಭಾಗ ಸಂಚಾಲಕ ಡಾ| ಎನ್. ನವೀನ್, ಮಾಜಿ ಶಾಸಕ ರುಕ್ಮಯ ಪೂಜಾರಿ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದ ಸಂಚಾಲಕ, ಮೇಯರ್ ಸು ಧೀರ್ ಶೆಟ್ಟಿ ಕಣ್ಣೂರು ಸ್ವಾಗತಿಸಿದರು. ರಾಕೇಶ್ ರೈ ಕಡೆಂಜಿ ಕಾರ್ಯಕ್ರಮ ನಿರೂಪಿಸಿದರು.
“ಜಾತ್ಯತೀತ’ ಪದ ಸೇರಿಸಿದ್ದು ಕಾಂಗ್ರೆಸ್
ಡಾ| ಬಿ.ಆರ್.ಅಂಬೇಡ್ಕರ್ ಅವರ ಮೂಲ ಸಂವಿಧಾನದಲ್ಲಿ “ಜಾತ್ಯತೀತ’ ಎನ್ನುವ ಪದವೇ ಇಲ್ಲ. ಆದರೆ 42ನೇ ತಿದ್ದುಪಡಿಯಲ್ಲಿ ಇಂದಿರಾ ಗಾಂಧಿಯವರು ಸೇರ್ಪಡೆ ಮಾಡಿದರು. ನಮಗೆ ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ನಂಬಿಕೆ ಇದೆ ಹೊರತು, ತಿದ್ದುಪಡಿ ಮಾಡಿದ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.