Lal Krishna Advani: ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ
Team Udayavani, Jun 27, 2024, 8:47 AM IST
ನವದೆಹಲಿ: ಬಿಜಿಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್ ) ಆಸ್ಪತ್ರೆಗೆ ದಾಖಲಿಸಲಾಗಿದೆ.
96 ವರ್ಷದ ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆದರೆ, ಅನಾರೋಗ್ಯದ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಜನವರಿಯಲ್ಲಿ ತಿಂಗಳ ಹಿಂದೆ ಮಾಜಿ ಉಪ ಪ್ರಧಾನಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ಪ್ರಕಟಿಸಲಾಗಿತ್ತು. ಮಾ. 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು. ಅಡ್ವಾಣಿ ಅವರು ಜೂನ್ 2002ರಿಂದ ಮೇ 2004ರವರೆಗೆ ಭಾರತದ ಉಪ ಪ್ರಧಾನಿ ಯಾಗಿ, ಕೇಂದ್ರ ಗೃಹ ಸಚಿವ ರಾಗಿ ಅಕ್ಟೋಬರ್ 1999ರಿಂದ ಮೇ 2004ರ ವರೆಗೆ ಸೇವೆ ಸಲ್ಲಿಸಿದ್ದರು.
ದೇಶದಲ್ಲಿ ಬಿಜೆಪಿ ಬೆಳೆಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅವರು, 1986ರಿಂದ 1990ರ ವರೆಗೆ, 1993ರಿಂದ 1998ರ ವರೆಗೆ ಹಾಗೂ 2004ರಿಂದ 2005ರ ವರೆಗೆ ಮೂರು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.