ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ
ಸುರಕ್ಷೆ ಸಾಮಗ್ರಿಗಳನ್ನು ಕರ್ತವ್ಯದ ಅವಧಿಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಿ
Team Udayavani, Jun 27, 2024, 2:30 PM IST
ಮಹಾನಗರ: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಹಾಗೂ ವಿದ್ಯುತ್ ಪರಿವೀಕ್ಷಣಾ ಇಲಾಖೆ ಸಹಯೋಗದೊಂದಿಗೆ ಬುಧವಾರ ಸುರಕ್ಷ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ನಗರದ ಬಿಜೈಯಲ್ಲಿರುವ ಮೆಸ್ಕಾಂ ಕಾರ್ಪೋರೆಟ್ ಕಚೇರಿ ಆವರಣದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ. ಪದ್ಮಾವತಿ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮೆಸ್ಕಾಂ ನೌಕರರು ಕಂಪೆನಿಯ ಹಿತ, ಗ್ರಾಹಕರ ತೃಪ್ತಿಯನ್ನು ಗಮನದಲ್ಲಿಟ್ಟು ಕೊಂಡು ಕೆಲಸ ಮಾಡುವುದರ ಜತೆಗೆ ಸುರಕ್ಷೆಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ. ಕಂಪೆನಿಯ
ವತಿಯಿಂದ ತಮಗೆ ನೀಡಿರುವ ಸುರಕ್ಷೆ ಸಾಮಗ್ರಿಗಳನ್ನು ಕರ್ತವ್ಯದ ಅವಧಿಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಿ ಎಂದರು.
ಮೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್. ಜಿ. ರಮೇಶ್, ಉಪಮುಖ್ಯ ವಿದ್ಯುತ್ ಪರಿವೀಕ್ಷಕ ಕೆ.ಎಂ. ಕಾಂತರಾಜು, ಮುಖ್ಯ ಎಂಜಿನಿಯರ್ ಪುಷ್ಪಾ, ಮುಖ್ಯ ಆರ್ಥಿಕ ಅಧಿಕಾರಿ ಮೌರಿಸ್ ಡಿ’ಸೋಜಾ, ಆರ್ಥಿಕ ಸಲಹೆಗಾರ ಬಿ. ಹರಿಶ್ಚಂದ್ರ, ಅಧೀಕ್ಷಕ ಎಂಜಿನಿಯರ್ ಕೃಷ್ಣರಾಜ್, ಕಾರ್ಯನಿರ್ವಾಹಕ ಎಂಜಿ ನಿಯರ್ ಲೋಹಿತ್, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ, ಮಾನ್ಯತೆ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಸಿಬಂದಿ ಪಾಲ್ಗೊಂಡಿದ್ದರು.
ವಾರ ಕಾಲ ಅಭಿಯಾನ
ಮಂಗಳೂರು ವಿಭಾಗ ವ್ಯಾಪ್ತಿಯ ಪವರ್‌ಮನ್‌ಗಳ ಜಾಥಾವು ಬಿಜೈಯಿಂದ ಬಲ್ಲಾಳ್‌ಬಾಗ್, ಲೇಡಿಹಿಲ್ ಮೂಲಕ ಸಾಗಿತು. ಸುರಕ್ಷೆಯ ಬಗ್ಗೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ವಿದ್ಯುತ್ ಸುರಕ್ಷೆ ಜಾಗೃತಿ ಕಾರ್ಯ ಕ್ರಮದ ಅಂಗವಾಗಿ ಮೆಸ್ಕಾಂ ವ್ಯಾಪ್ತಿ ಯಲ್ಲಿ ಮುಂದಿನ 1 ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.