Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
Team Udayavani, Jun 28, 2024, 9:53 AM IST
ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಒಳ ಹರಿವು ಹೆಚ್ಚುತ್ತಿದ್ದು, ಹನಗೋಡು ಅಣೆಕಟ್ಟೆ ಮೇಲೆ 2500 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಳೆದ ಮೂರು ದಿನಗಳಿಂದ ಲಕ್ಷ್ಮಣತೀರ್ಥ ನದಿ ಹುಟ್ಟುವ ಇರ್ಪು ಸೇರಿದಂತೆ ಸುತ್ತಮುತ್ತ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎರಡೇ ದಿನದಲ್ಲಿ ಲಕ್ಷ್ಮಣತೀರ್ಥ ನದಿಯ ಹನಗೋಡು ಅಣೆಕಟ್ಟೆ ತುಂಬಿ ಸುಮಾರು ಎರಡೂವರೆ ಅಡಿಯಷ್ಟು ನೀರು ಹರಿಯುತ್ತಿದೆ. ಶೀಘ್ರದಲ್ಲೇ ಮುಖ್ಯ ಕಾಲುವೆಗೆ ನೀರು ಹರಿಸಿ ಕೆರೆಗಳಿಗೆ ನೀರು ತುಂಬಿಸಲಾಗುವುದೆಂದು ಹಾರಂಗಿ ಹನಗೋಡು ಉಪ ವಿಭಾಗದ ಎಇಇ ಅಶೋಕ್ ತಿಳಿಸಿದ್ದಾರೆ.
ಕೊಚ್ಚಿ ಹೋಗುತ್ತಿರುವ ಕೊಳೆ:
ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಹನಗೋಡಿನ ಸೇತುವೆ ಬಳಿ ಮತ್ತು ಹುಣಸೂರು ನಗರದ ಮದ್ಯಭಾಗದಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿನ ಅಪಾರ ಪ್ರಮಾಣದ ಅಂತರಗಂಗೆ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಜೊತೆಗೆ ನಗರದ ಕೊಳಚೆ ನೀರಿನೊಂದಿಗೆ ಕೊಚ್ಚಿ ಕೊಂಡು ಹೋಗುತ್ತಿದೆ.
ರೈತರಲ್ಲಿ ಸಂತಸ:
ಮಳೆ ಇಲ್ಲದೆ ಸೊರಗುತ್ತಿದ್ದ ತಂಬಾಕು ಬೆಳೆಗೆ ಈ ಮಳೆಯು ಸಂಜೀವಿನಿಯಂತಾಗಿದೆ. ಇದರಿಂದ ತಂಬಾಕು ಹಾಗೂ ಶುಂಠಿ ಬೆಳೆಗಾರರು ಹರ್ಷಗೊಂಡಿದ್ದಾರೆ. ಇದೇ ರೀತಿ ಮಳೆ ಮುಂದುವರೆದಲ್ಲಿ ತಂಬಾಕು ಹಾಗೂ ಶುಂಠಿ ಬೆಳೆ ಕೊಳೆಯುವ ಭೀತಿಯೂ ಎದುರಾಗಿದೆ ಎನ್ನುತ್ತಾರೆ ರೈತರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.