ಉಳ್ಳಾಲ: ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ
Team Udayavani, Jun 28, 2024, 3:20 PM IST
ಉಳ್ಳಾಲ: ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯನ್ನು ಗುಣ ಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ ಅವರು ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಘಟಕದ ವತಿಯಿಂದ ಜನಶಿಕ್ಷಣ ಟ್ರಸ್ಟ್ ಮುಡಿಪು, ಜನಜೀವನ ಬಾಳೆಪುಣಿ ಮತ್ತು ಚಿತ್ತಾರ ಬಳಗದ ಸಹಯೋಗದಲ್ಲಿ ಜನಶಿಕ್ಷಣ ಟ್ರಸ್ಟ್‌ನ ಸಭಾಂಗಣದಲ್ಲಿ ನಡೆದ ಹಸುರಾಗಿಸೋಣ ಪರಿಸರ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ಮೂಲಕ ಸ್ವಚ್ಛ ಗ್ರಾಮದ ಪರಿಕಲ್ಪನೆ ಎಲ್ಲೆಡೆ ಸಾಕಾರಗೊಳ್ಳಬೇಕು ಎಂದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ| ಮೀನಾಕ್ಷಿ ರಾಮಚಂದ್ರ ಮಾತನಾಡಿ,
ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು. ಮುಂದಿನ ಪೀಳಿಗೆಯಲ್ಲಿ ಪರಿಸರ ಕಾಳಜಿ
ಹೆಚ್ಚಾಗಬೇಕು ಎಂದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಾಳೆಪುಣಿ ಅಧ್ಯಕ್ಷ ರಮೇಶ್ ಶೇಣವ ಅಧ್ಯಕ್ಷತೆ ವಹಿಸಿದ್ದರು. ಜನ ಶಿಕ್ಷಣ ಟ್ರಸ್ಟ್ ನ ತರಬೇತಿ ಕೇಂದ್ರದ ಶಿಕ್ಷಕಿ ಕಾವೇರಿ ಅವರನ್ನು ಸಮ್ಮಾನಿಸಲಾಯಿತು. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ನವಾಝ್, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಬಿ. ಉಮ್ಮರ್, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ ಮೊದಲಾದವರು ಉಪಸ್ಥಿತರಿದ್ದರು. ಅಭಾಸಾಪ ಮಂಗಳೂರು ತಾಲೂಕು ಘಟಕದ ಉಪಾಧ್ಯಕ್ಷ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಚಂದ್ರಹಾಸ ಕಣಂತೂರು ಕಾರ್ಯಕ್ರಮ ರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.