ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ
Team Udayavani, Jun 29, 2024, 1:09 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ.) ಶುಕ್ರವಾರ ದಿಲ್ಲಿ ಕೋರ್ಟ್‌ಗೆ ಹೊಸ ಹಾಗೂ 9ನೇ ಅರೋಪಪಟ್ಟಿಯನ್ನು ಸಲ್ಲಿಸಿದ್ದು, ಅದರಲ್ಲಿ ವಿನೋದ್ ಚೌಹಾಣ್ ಎಂಬ ವ್ಯಕ್ತಿಯನ್ನು ಆರೋಪಿ ಎಂದು ಹೆಸ ರಿ ಸಿದೆ. ಹಗರಣದ ತನಿಖೆಯ ಭಾಗವಾಗಿ ವಿನೋದ್ ಚೌಹಾಣ್‌ರನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ವರದಿಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ(ತಡೆ) ಕಾಯ್ದೆ ಅನ್ವಯ ಈ ಹೊಸ ಹಾಗೂ 9ನೇ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹಗರಣದ ಪ್ರಮುಖ ಆರೋಪಿ ಕವಿತಾ ಬಂಧನಕ್ಕೆ ಸಂಬಂಧಿ ಸಿದಂತೆ ವಿನೋದ್ ಪಾತ್ರವಿದ್ದು, ಕವಿತಾ ಅವರ ಸಹಾಯಕ ನೊಬ್ಬ, ಅಭಿಶೇಕ್ ಬೊಯಿನ್‌ಪಳ್ಳಿ ಅವರ ಆದೇಶದ ಮೇರೆಗೆ ಆರೋಪಿ ದಿನೇಶ್ ಅರೋರಾ ಕಚೇರಿ ಯಿಂದ ಹಣ ತುಂಬಿದ್ದ 2 ಬ್ಯಾಗ್‌ಗಳನ್ನು ಕೊಂಡೊಯ್ದು ವಿನೋದ್ ಚೌಹಾಣ್‌ಗೆ ತಲುಪಿಸಿರುವುದಾಗಿ ಸ್ವತಃ ಸಹಾಯಕ ಹೇಳಿದ್ದಾನೆ ಎಂದು ಇ.ಡಿ. ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.