Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ


Team Udayavani, Jun 29, 2024, 10:08 AM IST

5-kushtagi

ಕುಷ್ಟಗಿ: ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಕೋತಿಯ ಹುಚ್ಚಾಟಕ್ಕೆ ಜನ ಆತಂಕಗೊಂಡಿದ್ದಾರೆ. ಕೋತಿ ಕಚ್ಚುವಿಕೆ ಮುಂದುವರಿದ ಹಿನ್ನೆಲೆಯಲ್ಲಿ ಜೂ.29ರ ಶನಿವಾರ ಶಾಲೆಗೆ ರಜೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಜೂನ್ 27 ರಿಂದ ಕೋತಿಯ ಉಪಟಳ ಜಾಸ್ತಿಯಾಗಿದೆ. ಗಿಡ, ಮನೆಯ ಮಾಳಿಗೆಯ ಮೇಲೆ ಕೂರುವ ಕೋತಿ ಜ‌ನರ ಮೇಲೆ ಏಕಾಏಕಿ ದಾಳಿ ಮಾಡಿ ಸಿಕ್ಕ ಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ಕೋತಿಯ ದಾಳಿಗೆ ಮಕ್ಕಳಿಂದ ಹಿಡಿದು ವೃದ್ದರವರೆಗೆ ಒಟ್ಟು 15 ಜನರಿಗೆ ಗಾಯವಾಗಿದೆ.

ಮಾಬುಸಾಬ ಪಿಂಜಾರ, ದೇವಪ್ಪ ಕಂಬಾರ, ಮಲ್ಲಪ್ಪ ಅಗಸಿ ಮುಂದಿನ, ಅಡಿವೆಪ್ಪ  ಚಳ್ಳಾರಿ, ಶಂಕ್ರಮ್ಮ ಬೆಣಕಲ್ ಸೇರಿದಂತೆ ಮೊದಲಾದವರಿಗೆ ಕಚ್ಚಿದ್ದು ತಾವರಗೇರಾ ಸಮುದಾಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಹುಚ್ಚು ಕೋತಿಯನ್ನು ಹಿಡಿಯಲು ಜನರು ಎಷ್ಟೇ ಹರಸಾಹಸ ಪಟ್ಟರೂ ಕೋತಿ ಸೆರೆಯಾಗದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.

ಏಕಾಏಕಿ ಕೋತಿ ದಾಳಿಗೆ ಜನ ಹೊರಬರಲು ಹಿಂಜರಿಯುತ್ತಿದ್ದು, ಸಾರ್ವಜನಿಕರು ಕೈಯಲ್ಲಿ ಕೋಲು ಹಿಡಿದುಕೊಂಡು ಹೊರಗೆ ತಿರುಗಾಡುತ್ತಿದ್ದಾರೆ. ಬಹುತೇಕ ಮಕ್ಕಳಿಗೆ ಹುಚ್ಚು ಕೋತಿ ದಾಳಿ ಮಾಡಿದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲಾಗುತ್ತಿಲ್ಲ. ಮಕ್ಕಳ ಮೇಲೆ ಸಂಭವನೀಯ ದಾಳಿಗೆ ಶಾಲೆಗೆ ರಜೆ ನೀಡಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹುಚ್ಚು ಕೋತಿಯ ದಾಳಿಯ ತೀವ್ರತೆ ಅರಿತ ಅರಣ್ಯ ಇಲಾಖೆ ಬೋನು ಇಟ್ಟು ಸೆರೆ ಹಿಡಿಯಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.