T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ
ಸಾರ್ವಕಾಲಿಕ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರು...
Team Udayavani, Jun 30, 2024, 5:21 PM IST
ಹೊಸದಿಲ್ಲಿ: T20 ವಿಶ್ವಕಪ್ ವಿಜಯದ ನಂತರ ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಅವರು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಆಲ್ ರೌಂಡರ್ ರವೀಂದ್ರ ಜಡೇಜಾ ಅವರೂ ಅದೇ ಹಾದಿಯನ್ನು ಅನುಸರಿಸಿದ್ದಾರೆ.
ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳಿಂದ ಜಯ ಸಾಧಿಸಿ ಎರಡನೇ ಬಾರಿ ಟಿ20 ವಿಶ್ವಕಪ್ ಟ್ರೋಫಿಯನ್ನು ಪ್ರಶಸ್ತಿ ಮುಡಿಗೇರಿಸಿಕೊಂಡ ಮರುದಿನ ಜಡೇಜಾ ಟಿ 20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
T20 World Cup 2024 ಪಂದ್ಯಾವಳಿಯಲ್ಲಿ ಜಡೇಜಾ ಅಂತಹದ್ದೇನು ಫಾರ್ಮ್‌ನಲ್ಲಿರಲಿಲ್ಲ ಆದರೆ ಕಳೆದ ದಶಕದಲ್ಲಿ ವಿಶ್ವ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡದ ಪರ ಅಮೋಘ ಆಟವಾಡಿದ್ದರು. ಸಾರ್ವಕಾಲಿಕ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಆಟಗಾರರಾಗಿದ್ದಾರೆ.
ಸಂಭ್ರಮದ ಕ್ಷಣದಲ್ಲಿ ತೇಲಾಡುತ್ತಿರುವ ಸಮಯದಲ್ಲೇ ಇನ್‌ಸ್ಟಾಗ್ರಾಮ್ ಪೋಸ್ಟ್ ಮಾಡಿರುವ 35 ರ ಹರೆಯದ ಜಡೇಜಾ ” ಧನ್ಯವಾದ ತುಂಬಿದ ಹೃದಯದಿಂದ ನಾನು T20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿ ಅದನ್ನು ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವ ನನ್ನ ಕನಸು ನನಸಾಯಿತು, ಇದು ನನ್ನ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನದ ಶಿಖರವಾಗಿದೆ. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.