Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
ಮೈಸೂರಿನಿಂದ ಸುಮಾರು 15 ಮಂದಿ ಆಗಮಿಸಿದ್ದರು...
Team Udayavani, Jun 30, 2024, 8:35 PM IST
ಮಡಿಕೇರಿ : ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ಮೂಲದ ಶಶಿ (30) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪ್ರವಾಸಿತಾಣಗಳನ್ನು ವೀಕ್ಷಿಸಲೆಂದು ಮೈಸೂರಿನಿಂದ ಸುಮಾರು 15 ಮಂದಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ.
ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.