Parliament ; ಇಂದಿನಿಂದ ಸಂಸತ್ ಕಲಾಪದಲ್ಲಿ ಕಾವೇರುವ ಚರ್ಚೆ ಸಾಧ್ಯತೆ!
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಕೋಲಾಹಲ ನಿರೀಕ್ಷೆ
Team Udayavani, Jul 1, 2024, 6:34 AM IST
ಹೊಸದಿಲ್ಲಿ: ಕಳೆದ ವಾರ ಆರಂಭವಾಗಿರುವ ಸಂಸತ್ ಅಧಿವೇಶನ ಸೋಮವಾರದಿಂದ ಬಿರುಸು ಪಡೆ ಯುವ ಸಾಧ್ಯತೆಗಳು ಇವೆ. ಜೂ.24ರಿಂದ ಜೂ.28ರ ವರೆಗೆ ಪ್ರಮಾಣ ವಚನ ಸ್ವೀಕಾರ, ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣಕ್ಕೆ ಮಾತ್ರ ಸೀಮಿತವಾಗಿತ್ತು. ಜು.1ರಿಂದ ಕೇಂದ್ರ ಸರಕಾರ ಮತ್ತು ವಿಪಕ್ಷಗಳ ನಡುವೆ ನೀಟ್ ಪ್ರಶ್ನೆ ಪ್ರತಿಕೆಗಳ ಸೋರಿಕೆ, ಹಣದುಬ್ಬರ ಏರಿಕೆ, ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದರ ಜತೆಗೆ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಚರ್ಚೆಯೂ ಶುರುವಾಗಲಿದೆ.
ಲೋಕಸಭೆಯಲ್ಲಿ ಮಾಜಿ ಸಚಿವ ಅನುರಾಗ್ ಠಾಕೂರ್ ಸರಕಾರದ ಪರವಾಗಿ ಚರ್ಚೆ ಆರಂಭಿಸಲಿದ್ದಾರೆ. ಆ ಬಳಿಕ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಆರಂಭವಾಗಲಿದೆ. ಲೋಕಸಭೆಯಲ್ಲಿ ವಂದನಾ ನಿರ್ಣಯ ಕುರಿತಾದ ಚರ್ಚೆಗೆ 16 ಗಂಟೆಗಳನ್ನು ಮೀಸಲಿರಿಸಲಾಗಿದ್ದು, ಮಂಗಳವಾರ ಪ್ರಧಾನಿ ಮೋದಿ ಅವರು ಚರ್ಚೆ ಸಂಬಂಧಿಸಿದ ಪ್ರಶ್ನೆಗೆಳಿಗೆ ಉತ್ತರ ನೀಡುವ ಮೂಲಕ ಚರ್ಚೆ ಕೊನೆಗೊಳ್ಳಲಿದೆ. ರಾಜ್ಯಸಭೆಯಲ್ಲಿ ಚರ್ಚೆಗಾಗಿ 21 ಗಂಟೆ ಮೀಸಲಿರಿಸಲಾಗಿದ್ದು, ಪ್ರಧಾನಿ ಮೋದಿ ಬುಧವಾರ ರಾಜ್ಯಸಭೆಗೆ ಉತ್ತರಿಸುವ ಸಾಧ್ಯತೆಗಳಿದೆ.
ಶುಕ್ರವಾರ ವಂದನಾ ನಿರ್ಣಯದ ಬಳಿಕ ಚರ್ಚೆ ಆರಂಭಿಸಲು ಆಡಳಿತ ಪಕ್ಷ ಮುಂದಾದಾಗ ನೀಟ್ ಕುರಿತಂತೆಯೇ ಮೊದಲು ಚರ್ಚೆ ಆರಂಭವಾಗಬೇಕು ಎಂದು ವಿಪಕ್ಷಗಳು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು.
ಹಿಂದಿನ 2 ಅವಧಿಯಲ್ಲಿ ವಿಪಕ್ಷಗಳು ದುರ್ಬಲವಾಗಿದ್ದವು. ಈ ಬಾರಿ ಕಾಂಗ್ರೆಸ್ ಅಧಿಕೃತ ವಿಪಕ್ಷವಾಗಿದ್ದು, ರಾಹುಲ್ ಗಾಂಧಿ ಲೋಕಸಭೆಯ ವಿಪಕ್ಷ ನಾಯಕರಾಗಿದ್ದಾರೆ. ಹೀಗಾಗಿ ಈ ಬಾರಿ ಚರ್ಚೆಗಳು ತೀವ್ರವಾಗುವ ನಿರೀಕ್ಷೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.