Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ
Team Udayavani, Jul 1, 2024, 12:40 AM IST
ಮಡಿಕೇರಿ: ವಿರಾಜ ಪೇಟೆ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸ ಬೇಕು ಎಂದು ತಾಲೂಕು ಆಡಳಿತಾ ಧಿಕಾರಿಯಾಗಿರುವ ಜಿಲ್ಲಾ ಪಂಚಾ ಯತ್ ಉಪ ಕಾರ್ಯದರ್ಶಿ ಧನರಾಜ್ ಸೂಚನೆ ನೀಡಿದ್ದಾರೆ.
ವಿರಾಜಪೇಟೆ ತಾಲೂಕು ಪಂಚಾ ಯತ್ ಸಾಮರ್ಥ್ಯಸೌಧದಲ್ಲಿ ನಡೆದ ವಿರಾಜಪೇಟೆ ತಾಲೂಕು ಪಂಚಾ ಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಮಾಹಿತಿ ಪಡೆದು ಅವರು ಮಾತನಾಡಿದರು.
ತಾಲೂಕಿನಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆಯಲ್ಲಿ 35 ಪ್ರಕಣಗಳು ಕಂಡು ಬಂದಿದೆ. ಡೆಂಗ್ಯೂ ವ್ಯಾಪಿಸದಂತೆ ತಡೆಕಟ್ಟಲು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ನಿಂತ ನೀರಿ ನಿಂದ ಬರುತ್ತದೆ,
ಸೊಳ್ಳೆಗಳು ಉತ್ಪತ್ತಿ ಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ನಿರ್ದೇ ಶನ ನೀಡಿದರು. ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ಧಿ ಸಾಧಿಸುವಂತೆ ಕೃಷಿ ಅಧಿಕಾರಿಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.