Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!
Team Udayavani, Jul 1, 2024, 12:55 AM IST
ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ನಡೆದ 98 ದಿನಗಳ ಸಮೀಕ್ಷೆಯಲ್ಲಿ 39 ಮುರಿದಿರುವ ವಿಗ್ರಹಗಳು ಸೇರಿದಂತೆ ಒಟ್ಟು 1,710 ಅವಶೇಷಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರದೇಶ ಹೈಕೋರ್ಟ್ ಆದೇಶದನ್ವಯ ಭಾರತೀಯ ಪುರಾತತ್ವ ಇಲಾಖೆಯು ಈ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿದೆ. ಕಳೆದ ಗುರುವಾರವೇ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಸರಸ್ವತಿ, ಮಹಿಷಾಸುರ ಮರ್ದಿನಿ, ಗಣೇಶ, ಕೃಷ್ಣ, ಮಹಾದೇವ, ಬ್ರಹ್ಮ ಮತ್ತು ಹನುಮಂತನ ವಿಗ್ರಹಗಳು ಹಾನಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಹೇಳಲಾಗಿದೆ. ಜು.4ರಂದು ಎಎಸ್‌ಐ ತನ್ನ ಸಮೀಕ್ಷಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವ ಸಾಧ್ಯತೆಯಿದೆ. ಆದರೆ ಮುಸ್ಲಿಮರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.