America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ
ಅಮೆರಿಕದ ಪ್ಲೋರಿಡಾದಲ್ಲಿ ಜೂ.6ರಿಂದ 10ವರೆಗೆ ಆಯೋಜಿತವಾಗಿದ್ದ ಸ್ಪರ್ಧೆ
Team Udayavani, Jul 1, 2024, 8:02 PM IST
ಶಿರಸಿ: ತಾಲೂಕಿನ ಮುಂಡಿಗೇಸರ ಮೂಲದ ಹುಬ್ಬಳ್ಳಿಯ ಯುವತಿಯೊಬ್ಬಳು ಅಮೆರಿಕದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾಳೆ.
ಮುಂಡಿಗೇಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶ್ರುತಿ ಹೆಗಡೆ ಅಮೆರಿಕದಲ್ಲಿ ನಡೆದ “ಮಿಸ್ ಯುನಿವರ್ಸ್ ಪಿಟೈಟ್’ ಸ್ಪರ್ಧೆಯಲ್ಲಿ ಸುಂದರಿಯಾಗಿ ಹೊರಹೊಮ್ಮಿದ್ದಾಳೆ.
ಈ ಮೊದಲು 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದ ಶ್ರುತಿ, 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿಯನ್ನೂ ಗೆದ್ದಿದ್ದಳು.
ಅಮೆರಿಕದ ಪ್ಲೋರಿಡಾದಲ್ಲಿ ಜೂ.6ರಿಂದ 10ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟೂ 40 ದೇಶಗಳ ಸುಂದರಿಯರು ಭಾಗವಹಿಸಿದ್ದರು.
ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್ ಪೂರೈಸಿರುವ ಡಾ|ಶ್ರುತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಂಡಿ ಅಧ್ಯಯನ ನಡೆಸುತ್ತಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡಿವ್ಸ್, ಭೂತಾನ್ ಸೇರಿ ವಿವಿಧ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ .ಕೆಲವು ಧಾರಾವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್‌ನಲ್ಲೂ ನಟಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.