BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
Team Udayavani, Jul 2, 2024, 10:33 AM IST
ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ: ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಎರಡ್ಮೂರು ವರ್ಷದ ಹಿಂದೆ ಕೋವಿಡ್ ಅವಧಿಯಲ್ಲಿ ನಡೆದಿರುವ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕೆಲವು ಅಧಿಕಾರಿಗಳ ಪ್ರಾಥಮಿಕ ತನಿಖೆ ನಡೆಸಲು ಅನುಮತಿ ಕೇಳಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರಕರಣ ತನಿಖೆ ನಡೆಸುವ ಸಂಬಂಧ ಪಾಲಿಕೆ ಕೂಡ ಲೋಕಾಯುಕ್ತ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿ ಇಲ್ಲದಿರುವ ಸಹಕಾರಿ ಸಂಘ ಹಾಗೂ ಕೋ-ಆಪರೇಟಿವ್ ಸೊಸೈಟಿಗಳಿಗೆ ಅಕ್ರಮವಾಗಿ ಪಾಲಿಕೆಯಿಂದ ಕೋಟ್ಯಂತರ ರೂ. ವರ್ಗಾವಣೆಯಾಗಿದೆ ಎಂಬುವುದು ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಡಿಟ್‌ನಲ್ಲಿ ತಿಳಿದು ಬಂದಿದೆ. 102 ಕೋಟಿ ರೂ. ಹಣ ವರ್ಗಾವಣೆ ಆಗಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ಕೂಡ ಕೆಲವು ಅಧಿಕಾರಿಗಳ ತನಿಖೆಗಾಗಿ ಅನುಮತಿ ಕೇಳಿದ್ದಾರೆ. ಬೇರೆ ಬೇರೆ ಇಲಾಖೆ ಅಧಿಕಾರಿಗಳು ಕೂಡ ಇದ್ದು ಅವರನ್ನು ಹೊರತು ಪಡಿಸಿ ಬಿಬಿಎಂಪಿ ಅಧಿಕಾರಿಗಳ ತನಿಖೆಗೆ ಅನುಮತಿ ನೀಡಲಾಗಿದೆ. ಆದರೆ ಬೇರೆ ಬೇರೆ ಇಲಾಖೆಯ ಅಧಿಕಾರಿಗಳ ತನಿಖೆ ಅನುಮತಿ ನೀಡಲು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತುಷಾರ್ ಗಿರಿನಾಥ್ ತಿಳಿಸಿದರು.
ಎಲ್ಲ ವಲಯಗಳಲ್ಲಿ ಪರಿಶೀಲನೆ: ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಹಗರಣ ನಡೆದಿದೆ. ಸರ್ಕಾರ ಕೂಡ ಪ್ರಾಥಮಿಕ ತನಿಖಾ ವರದಿ ಕೇಳಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹಣ ಹೋಗಿರುವ ಬಗ್ಗೆ ಪಾಲಿಕೆ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ 20 ಕೋಟಿ ರೂ. ವರೆಗೂ ಹೋಗಿರುವ ಮಾಹಿತಿ ಇದೆ. ಆ ಹಿನ್ನೆಲೆಯಲ್ಲಿ ಪಾಲಿಕೆ ಎಲ್ಲ ವಲಯಗಳಲ್ಲಿ ಈ ರೀತಿಯಲ್ಲಿ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುವುದರ ಕುರಿತು ಪರಿಶೀಲನೆ ನಡೆಸುವಂತೆ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಳೆದ ಎರಡ್ಮೂರು ವರ್ಷಗಳಲ್ಲಿ ಬಿಬಿಎಂಪಿಯ ಬೇರೆ ಬೇರೆ ವಲಯಗಳಲ್ಲಿ 108 ಕೋಟಿ ರೂ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹೋಗಿದೆ ಎನ್ನಲಾಗುತ್ತಿದೆ. ಆದರೆ ಎಷ್ಟೆಷ್ಟು ಮೊತ್ತದ ಹಣ ಹೋಗಿದೆ ಎಂಬುವುದು ಇನ್ನೂ ತಿಳಿದಿಲ್ಲ ಎಂದರು.
ಡೆಂಘೀ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣದ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡೆಂಘಿ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವ ಕೆಲಸ ಕೂಡ ನಡೆದಿದೆ. ಸುಮಾರು 1400 ಸಿಬ್ಬಂದಿ ಪ್ರತಿ ದಿನ 80-85 ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜತೆಗೆ ಎನ್‌ಎಸ್‌ಎಸ್ ಮತ್ತು ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳನ್ನು ಕೂಡ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ದಿನ 7-80 ರಕ್ತ ಪರೀಕ್ಷೆ ನಡೆಯುತ್ತಿದ್ದ ಅದಲಲ್ಲಿ 12 ಪಾಸಿಟಿನ್ ಪ್ರಕರಣಗಳು ಕಂಡು ಬರುತ್ತಿವೆ ಎಂದು ತಿಳಿಸಿದರು.
ಅವಧಿ ಮೀರಿ ತೆರಿಗೆ ಕಟ್ಟುವರಿಗೆ ರಿಯಾಯ್ತಿ ಇಲ್ಲ: ಪಾಲಿಕೆ ಆಸ್ತಿಗೆ ತೆರಿಗೆ ಕಟ್ಟುವಂತೆ ಸಾರ್ವಜನಿಕರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಅವಧಿ ಮುಗಿದ ಬಳಿಕ ತೆರಿಗೆ ಕೊಟ್ಟುವರಿಗೆ ರಿಯಾಯ್ತಿ ಇರುವುದಿಲ್ಲ. ಈಗಾಗಲೇ ಶೇ.50ರಷ್ಟು ಮಂದಿ ಮಾತ್ರ ತೆರಿಗೆ ಕಟ್ಟಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ದೊಡ್ಡ ದೊಡ್ಡ ಮೊತ್ತ ಉಳಿಸಿಕೊಂಡಿರುವ ಆಸ್ತಿಗಳ ಸೀಜ್ ಮಾಡುವ ಕೆಲಸ ಈಗಾಗಲೇ ಪಾಲಿಕೆ ಕಂದಾಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Chennai: ಐಶ್ವರ್ಯ ರಜನಿಕಾಂತ್, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್
information Technology Appointment: ಬೆಂಗಳೂರಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.