Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
Team Udayavani, Jul 2, 2024, 11:35 AM IST
ಧನ್ಯಾ ರಾಮ್ ಕುಮಾರ್ ಪೃಥ್ವಿ ಅಂಬಾರ್ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.ಪೃಥ್ವಿ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯಾರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.
ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿತರಾಗಿದ್ದ ಧನ್ಯಾ ಇತ್ತೀಚೆಗಷ್ಟೇ ಜಡ್ಜಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ಕಾಲಪತ್ಥರ್ ರಿಲೀಸ್ ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ.
ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್ ಬಾಯ್ ಯಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್ ಈ ಚಿತ್ರದಲ್ಲಿ ಆ್ಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.
ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ಟೈನರ್. ಡಾ.ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಸಚಿನ್ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ 3ರಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.