Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Team Udayavani, Jul 2, 2024, 8:14 PM IST

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ  ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ, ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ. ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು.

ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಇದಲ್ಲದೆ ಎತ್ತಿನಭುಜ ಸೇರಿದಂತೆ ಕೆಲವು ಕಡೆಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಇರುವುದಿಲ್ಲ. ಈ ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.

ಚಾರಣಿಗರ ಸಂಖ್ಯೆಗೆ ಮಿತಿ

ಕೆಲವು ಪ್ರವಾಸಿ ಸಂಸ್ಥೆಗಳು (ಟೂರ್ ಆಪರೇಟರ್ ಗಳು) ಚಾರಣಪಥಗಳ ಬಗ್ಗೆ ಯುವಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು, ಇದರ ಪರಿಣಾಮವಾಗಿ ಚಾರಣಪಥಗಳಲ್ಲಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ಪರಿಸರ ಉಳಿಸಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದು ಹೇಳಿದರು.

ಪ್ರತಿಯೊಂದು ಚಾರಣ ಪಥದಲ್ಲೂ ಅದರ ವಿಸ್ತಾರ, ಅಲ್ಲಿರುವ ಗೈಡ್ ಮತ್ತು ಇತರ ಮೂಲಭೂತ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು. ಯಾವುದೇ ಚಾರಣಪಥದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಚಾರಣಿಗರಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ತಪಾಸಣೆ

ಒಂದೊಮ್ಮೆ ಯಾವುದೇ ಚಾರಣ ಪಥದಲ್ಲಿ ಹೆಚ್ಚಿನ ಸಂಖ್ಯೆಯ ಚಾರಣಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದು ದೂರು ಬಂದರೆ, ಈ ಬಗ್ಗೆ ಥರ್ಡ್ ಪಾರ್ಟಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಒಂದೇ ವೆಬ್ ಸೈಟ್ ನಲ್ಲಿ ವಿವಿಧ ಚಾರಣ ಪಥಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಇರುವ ಕಾರಣ, ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ವಿವರಿಸಿದರು.

ಟಾಪ್ ನ್ಯೂಸ್

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.