B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್ ಕ್ಷಮೆ ಕೇಳಲಿ
ವಿಫಲ ನಾಯಕನಿಗೆ ಹಿರಿಯರಿಂದ ಪಾಠ ಅಗತ್ಯ
Team Udayavani, Jul 2, 2024, 9:13 PM IST
ಬೆಂಗಳೂರು: ಮೊದಲ ಬಾರಿಗೆ ವಿಪಕ್ಷ ನಾಯಕನಾಗಿ ನೇಮಕಗೊಂಡಿರುವ ರಾಹುಲ್ ಗಾಂಧಿಯವರಿಗೆ ಸಂಸತ್ತಿನಲ್ಲಿ ಹೇಗೆ ವರ್ತಿಸಬೇಕೆಂಬ ಬಗ್ಗೆ ಕಾಂಗ್ರೆಸ್‌ನ ಹಿರಿಯರು ಹೇಳಿಕೊಡಲಿ. ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್ ದೇಶದ ಜನತೆಯ ಕ್ಷಮೆ ಯಾಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಸತತ 3 ಬಾರಿ ಪ್ರಯತ್ನ ನಡೆಸಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಾಗದ ರಾಹುಲ್ ವಿಫಲ ನಾಯಕ. ಇದೇ ಮೊದಲ ಬಾರಿಗೆ ವಿಪಕ್ಷ ನಾಯಕನ ಸ್ಥಾನ ಲಭಿಸಿದೆ. ವಿಪಕ್ಷ ನಾಯಕನಾಗಿ ಸಂಸತ್ತಿನಲ್ಲಿ ಮಾಡಿದ ಚೊಚ್ಚಲ ಭಾಷಣ ಸುಳ್ಳು, ನಿರಾಶೆ, ಆಧಾರರಹಿತ ಆರೋಪಗಳಿಂದ ಕೂಡಿದೆ ಎಂದು ಟೀಕಿಸಿದರು.
ಹಿಂದೂಗಳು ಹಿಂಸಾಚಾರ ಮತ್ತು ದ್ವೇಷದಲ್ಲಿ ಹಗಲಿರುಳು ನಿರತರು ಎಂಬ ಮಾತನ್ನು ಹೇಳುವ ಮೂಲಕ ರಾಹುಲ್ ದೇಶದ ಅಸಂಖ್ಯಾಕ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ, ತೇಜೋವಧೆ ಮಾಡಿದ್ದಾರೆ. ಅದೂ ಸಾಲದೆಂಬಂತೆ ಅಗ್ನಿವೀರ್, ರೈತರ ಬಗ್ಗೆ, ಅಯೋಧ್ಯೆ ವಿಚಾರ ಮಾತ್ರವಲ್ಲದೆ, ಮೈಕ್ರೋಫೋನ್ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.