Muda ಅಕ್ರಮದಲ್ಲಿ ಗೋಲ್ಮಾಲ್ ಸಿಎಂ: ಆರ್. ಅಶೋಕ್ ಆರೋಪ
400 ಕೋಟಿ ರೂ. ಗುಳುಂ: ವಿಪಕ್ಷ ನಾಯಕನ ಟೀಕೆ
Team Udayavani, Jul 2, 2024, 11:34 PM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ “ಗೋಲ್ಮಾಲ್ ಸಿಎಂ’ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 7 ಪ್ರಶ್ನೆ ಕೇಳಿರುವ ಅಶೋಕ್, ಗೋಲ್ಮಾಲ್ ಸಿಎಂ-400 ಕೋಟಿ ರೂಪಾಯಿ ಗುಳುಂ ಎಂದು ವ್ಯಂಗ್ಯವಾಡಿದ್ದಾರೆ.
1. ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿಯ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?
2. ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಿಸಲು ಹೊರಟಿದ್ದೀರಿ?
3. 4,000 ಕೋಟಿ ರೂ. ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ನಿಜಕ್ಕೂ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?
4. 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?
5. ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸು ಮಾಡಿದ್ದು ಯಾರು?
6. ಸಚಿವ ಸಂಪುಟದ ಅನುಮತಿ ಪಡೆಯದೆ ನಿವೇಶನ ನೀಡಲು ಅನುಮತಿಸಿದ್ದು ಯಾರು?
7. ನಿಮ್ಮ ತವರು ಜಿಲ್ಲೆ ಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ ಇದಕ್ಕೆ ಉತ್ತರಿಸುವಿರಾ? ಎಂದು ಅಶೋಕ್ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.