Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ
Team Udayavani, Jul 3, 2024, 10:51 AM IST
ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ರಾಜರಾಜೇಶ್ವರಿನಗರ ನಿವಾಸಿ ನರಸಿಂಹರಾಜು (38) ಬಂಧಿತ. ಆರೋಪಿಯಿಂದ 1.38 ಕೋಟಿ ರೂ. ಮೌಲ್ಯದ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿ ಪ್ರತಿಷ್ಠಿತ ನೈಕ್, ಪೂಮಾ, ಅಡಿದಾಸ್ ಸೇರಿ ಆರು ಕಂಪನಿಗಳ ಹೆಸರಿನಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಬಿಇಎಂಎಲ್ ಲೇಔಟ್ ನಲ್ಲಿರುವ ಆತನ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ನಕಲಿ ಬಟ್ಟೆಗಳನ್ನು ಅಸಲಿ ಕಂಪನಿಯ ಬಟ್ಟೆಗಳೆಂದು ಮಾರಾಟ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ.
ಆರೋಪಿಯ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಹಕ್ಕುಸ್ವಾಮ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.