Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
Team Udayavani, Jul 3, 2024, 10:53 AM IST
ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ 1ನೇ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ.
ದೇವರಾಜ್(21) ಜೈಲು ಶಿಕ್ಷೆಗೊಳಗಾದ ಅಪರಾಧಿ. ಲಗ್ಗೆರೆ ನಿವಾಸಿಯಾದ ದೇವರಾಜ್ 2021ರಲ್ಲಿ ಮನೆ ಸಮೀಪದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ.
ಘಟನೆ ಸಂಬಂಧ ಆತನ ವಿರುದ್ಧ ಫೋಕೊÕ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ ಸ್ಪೆಕ್ಟರ್ ಆಗಿದ್ದ ವೆಂಕಟೇಗೌಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ವಿಚಾರಣಾ ಕಾಲದಲ್ಲಿ ಆರೋಪಿ ಕೃತ್ಯವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯನ್ನು ದೋಷಿ ಎಂದು ಪರಿಗಣಿಸಿದ ನ್ಯಾ.ಎನ್.ಎಂ.ರಮೇಶ್ ಅವರು ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಬಾಲಕಿಗೆ ಪರಿಚಯವಾಗಿದ್ದ ಆರೋಪಿಯು ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯಿದ್ದ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಅದೇ ದಿನವೇ ಬಾಲಕಿಗೆ ಜ್ವರ ಬಂದಿದ್ದರಿಂದ ಪಾಲಕರು ಆಸ್ಪತ್ರೆಗೆ ಕರೆದೊಯ್ದಿದ್ದರು.
ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಗುಪ್ತಾಂಗಕ್ಕೆ ಬಲವಾದ ಏಟಾಗಿದೆ ಎಂದು ವರದಿ ನೀಡಿದ್ದರು. ಈ ಬಗ್ಗೆ ಪಾಲಕರು ಮಗಳನ್ನು ಪ್ರಶ್ನಿಸಿದಾಗ ಆರೋಪಿಯು ಮನೆಗೆ ಕರೆದೊಯ್ದು ಕೃತ್ಯವೆಸಗಿರುವುದಾಗಿ ತಿಳಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.