![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jul 3, 2024, 1:54 PM IST
ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಬುಧವಾರ ನಡೆದಿದೆ.
ಓರ್ವನ ರಕ್ಷಣೆ
ಬಿಹಾರ ಮೂಲದ ಕಾರ್ಮಿಕ ರಾಜಕುಮಾರ್ (18) ನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೂ ಸಿಲುಕಿಕೊಂಡಿರುವ ಕಾರ್ಮಿಕ ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಧಿಕಾರಿಗಳು, ಅಗ್ನಿಶಾಮಕ ದಳ , ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ , ಎಸ್ ಡಿಆರ್ ಎಫ್ ಪಡೆಗಳು ದೌಡಾಯಿಸಿದ್ದು, ರಕ್ಷಣ ಕಾರ್ಯ ನಡೆಸುತ್ತಿದ್ದಾರೆ. ಬಲ್ಮಠ ರಸ್ತೆ ಬದಿಯಲ್ಲಿ ಖಾಸಗಿ ನಿರ್ಮಾಣಕ್ಕೆ ಸಂಸ್ಥೆಗೆ ಸೇರಿದ ಜಾಗ ಇದಾಗಿದೆ.
ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್‌ಗಳ ಮೇಲೆ ಮಣ್ಣು ಬಿದ್ದಿದ್ದು, ಸಿಲುಕಿರುವ ಕಾರ್ಮಿಕರು ಮಾತನಾಡುತ್ತಿದ್ದಾರೆ. ಸದ್ಯ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿ ಕೊಂಡಿದ್ದರು. ಕೋರ್ ಕಟ್ಟಿಂಗ್ ಮೂಲಕ ರಕ್ಷಣ ಕಾರ್ಯ ನಡೆಸಲಾಗುತ್ತಿದೆ.
ಮಣ್ಣಿನಡಿ ಸಿಲುಕಿರುವ ರಕ್ಷಣ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿದಂತೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಸುಮಾರು 60 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಇಬ್ಬರು ಸಿಲುಕಿದ್ದರು. ಕಬ್ಬಿಣದ ಫ್ರೇಮ್ ಒಳಗೆ ಇರುವುದರಿಂದ ಸದ್ಯ ಪ್ರಾಣಾಪಾಯ ಇಲ್ಲ ಎನ್ನಲಾಗಿದೆ. ಮೊದಲು ಇಬ್ಬರಿಗೂ ಕುಡಿಯಲು ನೀರು ಪೂರೈಸಲಾಗಿತ್ತು.
ಮೂರು ತಾಸುಗಳಿಂದ ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗೆ ವೈದ್ಯರ ತಂಡದಿಂದ ನಿಗಾ ಇರಿಸಲಾಗಿದೆ.
ರಿಟೈನಿಂಗ್ ವಾಲ್ ತುಂಡರಿಸುವ, ಮಣ್ಣು ತೆಗೆಯುವ ಕಾರ್ಯ ಜತೆಯಾಗಿ ನಡೆಯುತ್ತಿದೆ. ವೈದ್ಯರು ಡ್ರಿಪ್ಸ್ ನೀಡಿದ್ದಾರೆ. ರಕ್ಷಿಸಲಾದ ಕಾರ್ಮಿಕರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.