![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 4, 2024, 11:18 AM IST
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ – ಹೇಮಂತ್ ರಾವ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಚಿತ್ರಕ್ಕೆ ಫಿಕ್ಸ್ ಮಾಡಲಾಗಿದೆ.
ಈಗಾಗಲೇ ಸ್ಯಾಂಡಲ್ ವುಡ್‌ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಸಪ್ತಸಾಗರದಾಚೆ ಎಲ್ಲೋ(ಸೈಡ್ ಎ,ಬಿ) ಚಿತ್ರಗಳನ್ನು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಹೇಮಂತ್ ರಾವ್ ಮಾಸ್ ಹೀರೋ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದರಿಂದ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಪ್ರೀ ಪ್ರೊಡಕ್ಷನ್‌ನಲ್ಲಿ ಬಿಝಿಯಾಗಿರುವ ನಡುವೆಯೇ ಚಿತ್ರತಂಡ ಸಿನಿಮಾದ ಟೈಟಲ್ ರಿವೀಲ್ ಮಾಡಿ ಕುತೂಹಲವನ್ನು ಹೆಚ್ಚಿಸಿದೆ.
ಕ್ಲಾಸ್ ಸಿನಿಮಾಗಳನ್ನು ಮಾಡಿ ಸೈ ಎನ್ನಿಸಿಕೊಂಡಿರುವ ಹೇಮಂತ್ ರಾವ್ ಇದೀಗ ಹೊಸ ಬಗೆಯ ಸಿನಿಮಾದತ್ತ ಮುಖ ಮಾಡಲಿದ್ದಾರೆ.
ಸಿನಿಮಾಕ್ಕೆ “ಭೈರವನ ಕೊನೆ ಪಾಠʼ ಎನ್ನುವ ವಿಭಿನ್ನ ಟೈಟಲ್ ನ್ನು ಇಡಲಾಗಿದೆ. ಟೈಟಲ್ ನಿಂದಲೇ ಚಿತ್ರದ ಬಗ್ಗೆ ಹೇಮಂತ್ ರಾವ್ ಕುತೂಹಲವನ್ನು ಹೆಚ್ಚಿಸಿದ್ದಾರೆ. “ಅತ್ಯಂತ ಮುಖ್ಯವಾದ ಪಾಠವನ್ನು ಇನ್ನೂ ಕಲಿಸಬೇಕಾಗಿದೆ” ಎನ್ನುವ ಕ್ಯಾಪ್ಷನ್ ನ್ನು ನೀಡಲಾಗಿದೆ.
ವೈಶಾಖ್ ಗೌಡ ಎನ್ನುವವರು “ವಿಜೆ ಫಿಲಂಸ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಖ್ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೆಪ್ಟೆಂಬರ್ ನಂತರ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಅಂದಹಾಗೆ, ಸೌತ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ. ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಚಿತ್ರ ಮೂಡಿಬರುತ್ತಿದೆ.
The Most Important Lesson Is The One Yet To Be Taught. #BhairavanaKonePaaTa #BKP #VJF #VaishakJFilms #Shivarajkumar @hemanthrao11 @Vaishak_J_Films #VaishakJGowda pic.twitter.com/awC3kjNSff
— DrShivaRajkumar (@NimmaShivanna) July 4, 2024
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.